ಸಂಸತ್‌ ಚುನಾವಣೆ : ಇವರೇ ನೋಡಿ ಟಿಕೆಟ್‌ ಕೈತಪ್ಪುವ ಹಾಲಿ ಸಂಸದರು..?

ಬೆಂಗಳೂರು, ಮಾ.೧೩, ೨೦೨೪ : ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ಕಾಂಗ್ರೆಸ್, ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಗೊಂದಲ‌‌ ಮುಂದುವರೆದಿದೆ.

ಚುನಾವಣೆಗೆ ಹೊಸಬರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಪರಿಣಾಮ ಹಾಲಿ 25 ಸಂಸದರ ಪೈಕಿ 10ಕ್ಕೂ ಹೆಚ್ಚು ಮಂದಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರತಾಪ್ ಸಿಂಹ, ಉಡುಪಿ-ಚಿಕ್ಕಮಗಳೂರಿನಲ್ಲಿ ಶೋಭಾಕರಂದ್ಲಾಜೆ, ಉತ್ತರಕನ್ನಡದಲ್ಲಿ ಅನಂತಕುಮಾರ್ ಹೆಗಡೆ, ಬೆಂಗಳೂರು ಉತ್ತರದಲ್ಲಿ ಡಿ ವಿ ಸದಾನಂದಗೌಡಗೆ ಟಿಕೆಟ್ ಕೈತಪ್ಪುವ ಸಾಧ್ಯತೆ.

15ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲಿರುವ ಬಿಜೆಪಿ. ವಿಷಯ ತಿಳಿದು ಟಿಕೆಟ್ ಪಡೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿರುವ ಬಿಜೆಪಿಯ ಹಾಲಿ ಸಂಸದರು. ಬೆಂಬಲಿಗರ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರಭಾವ ಬೀರಲು ಹರಸಾಹಸ ಪಡುತ್ತಿರುವ ಸಂಸದರು.

ಇತ್ತ ಇದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದ ಬಿಜೆಪಿ ಹೈಕಮಾಂಡ್. ಕೆಲ ಕ್ಷೇತ್ರಗಳಲ್ಲಿ ಅಚ್ಚರಿಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.

ಇದೇ ರೀತಿ ಕಾಂಗ್ರೆಸ್ ನಲ್ಲೂ ಟಿಕೆಟ್ ಹಂಚಿಕೆ ಬಿಕ್ಕಟ್ಟು ಮುಂದುವರಿದಿದೆ. ಇದುವರೆಗೆ ರಾಜ್ಯದ 7 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಮಾತ್ರ ಪ್ರಕಟಿಸಿರುವ ಕಾಂಗ್ರೆಸ್ ಹೈಕಮಾಂಡ್. ಇನ್ನುಳಿದ 21 ಕ್ಷೇತ್ರಗಳ ಅಭ್ಯರ್ಥಿಗಳನ್ನು ಪ್ರಕಟಿಸಲು ಮೀನಾಮೇಷ ಎಣಿಸುತ್ತಿರುವ ಕೈ  ನಾಯಕರು.

ಹಾಲಿ ಸಚಿವರನ್ನೇ  ಕಣಕ್ಕಿಳಿಸುವ ಪ್ರಯತ್ನ ಫಲಪ್ರದವಾಗದ ಹಿನ್ನೆಲೆ. ಕೆಲ ಕ್ಷೇತ್ರಗಳಲ್ಲಿ ಸಚಿವರ ಸಂಬಂಧಿಕರನ್ನು ಕಣಕ್ಕಿಳಿಸಲು ಚಿಂತನೆ.  ಹೀಗಾಗಿ ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿರುವ ಕಾಂಗ್ರೆಸ್ ಹೈಕಮಾಂಡ್.

key words: karnataka  ̲ bjp ̲ mps ̲ ticket ̲ miss ̲ election.