“ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ತರಲು ನೆರವು ನೀಡುವಂತೆ ನಿರ್ಮಲಾ ಸೀತಾರಾಮನ್ ಗೆ ಸಚಿವ ಡಾ.ಕೆ.ಸುಧಾಕರ್ ಮನವಿ”

ಬೆಂಗಳೂರು,ಫೆಬ್ರವರಿ,21,2021(www.justkannada.in) : ಕರ್ನಾಟಕಕ್ಕೆ ಏಮ್ಸ್ ಸಂಸ್ಥೆ ತರಲು ಮತ್ತು ಕಲ್ಯಾಣ ಕರ್ನಾಟಕದಲ್ಲಿ ನಿಮ್ಹಾನ್ಸ್ ನ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ನೆರವು ನೀಡುವಂತೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದರು.jkಬೆಂಗಳೂರಿನಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಸಚಿವ ಡಾ.ಕೆ.ಸುಧಾಕರ್ ಮನವಿ ಭೇಟಿಯಾಗಿ ಆರೋಗ್ಯ ಕೇಂದ್ರಿತ ಬಜೆಟ್ ಮಂಡಿಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸಲಾಯಿತು.

4 ಕಡೆ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ಗೆ ಮನವಿ 

ರಸ್ತೆ ಅಪಘಾತಗಳಿಂದ ಉಂಟಾಗುವ ಪ್ರಾಣ ಹಾನಿಯನ್ನು ತಗ್ಗಿಸಲು ರಾಷ್ಟ್ರೀಯ ಹೆದ್ದಾರಿಗಳಿಗೆ ಹೊಂದಿಕೊಂಡಂತೆ 4 ಕಡೆ ಸುಸಜ್ಜಿತ ಟ್ರಾಮಾ ಕೇರ್ ಸೆಂಟರ್ ಗಳನ್ನು ಸ್ಥಾಪಿಸುವ ಹಾಗೂ ಕ್ಯಾನ್ಸರ್, ಕಿಡ್ನಿ, ಹೃದ್ರೋಗಳಿಗೆ ಚಿಕಿತ್ಸೆ ಒದಗಿಸಲು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನೊಳಗೊಂಡ ಹೆಲ್ತ್ ಸಿಟಿ ನಿರ್ಮಿಸುವ ಕುರಿತಂತೆ ಚರ್ಚಿಸಲಾಯಿತು.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆಗಾಗಿ ಸಹಕಾರ

Karnataka-Aims-Organization-bring-Assistance-giving-Nirmala Sitharaman-Minister-Dr.K.Sudhakar-Appeal 

ಮಳೆಯಾಶ್ರಿತ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಲು ಹಾಗೂ ಕೋಚಿಮುಲ್ ಮತ್ತು ಡಿಸಿಸಿ ಬ್ಯಾಂಕ್ ವಿಭಜನೆ ಮಾಡಲು ಕೇಂದ್ರ ಸರ್ಕಾರದ ಸಹಕಾರ ಕೋರಲಾಯಿತು.

key words : Karnataka-Aims-Organization-bring-Assistance-giving-Nirmala Sitharaman-Minister-Dr.K.Sudhakar-Appeal