ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭ

ಬೆಂಗಳೂರು, ಫೆಬ್ರವರಿ 14, 2022 (www.justkannada.in): ಇಂದಿನಿಂದ 10 ದಿನಗಳ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು ಇಂದು ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೊಟ್ ಭಾಷಣ ಮಾಡಲಿದ್ದಾರೆ.

ಹಿಂಸಾಚಾರಕ್ಕೆ ತಿರುಗಿ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಬೇಕಾಗಿ ಬಂದ ಹಿಜಾಬ್ ವಿವಾದ ಕುರಿತು ಸರ್ಕಾರವನ್ನು ಪ್ರತಿಪಕ್ಷ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಹಿಜಾಬ್ ವಿವಾದ ಮಾತ್ರವಲ್ಲದೆ ರಾಜ್ಯ ಸರ್ಕಾರವನ್ನು ಪ್ರತಿಪಕ್ಷಗಳು ಹಲವು ವಿಷಯಗಳಲ್ಲಿ ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.

ನೈತಿಕ ಪೊಲೀಸ್ ಗಿರಿ ಘಟನೆಗಳು, ಮೇಕೆದಾಟು ಯೋಜನೆ ವಿಳಂಬ, ನದಿಗಳ ಅಂತರ ಜೋಡಣೆ ವಿಷಯ ಮತ್ತು ರೈತರ ವಿಚಾರಗಳ ಕುರಿತು ಸರ್ಕಾರವನ್ನು ತೀವ್ರ ತರಾಟೆಗೆ ಕಾಂಗ್ರೆಸ್ ತೆಗೆದುಕೊಳ್ಳುವ ಸಾಧ್ಯತೆಯಿದೆ.