Friday, July 31, 2026

BDA Apartments

Home Front Page ಆ.13 ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಆ.13 ರಂದು ಅಖಂಡ ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ

ಬೆಂಗಳೂರು,ಜುಲೈ,31,2026 (www.justkannada.in):  ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿನಿತ್ಯ 3,500 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ನೀಡುರುವ ಆದೇಶ ಮತ್ತು ಅದನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಮಂಡಳಿಯ ನಿರ್ಧಾರವನ್ನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಕಾವು ಹೆಚ್ಚಾಗಿದ್ದು ಇದೀಗ ಆಗಸ್ಟ್ 13ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ಇಂದು ಕನ್ನಡ ಪರ ಸಂಘಟನೆಗಳ ಜೊತೆ ಸಭೆ ನಡೆಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಆಗಸ್ಟ್ 13 ರಂದು ಅಖಂಡ ಕರ್ನಾಟಕ ಬಂದ್ ಮಾಡುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ವಾಟಾಳ್ ನಾಗರಾಜ್, ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿ  ಆಗಸ್ಟ್ 13 ರಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಮಾಡಲಾಗುತ್ತದೆ. ವಿವಿಧ ಸಂಘಟನೆಗಳು ಬಂದ್ ಗೆ ಸಂಪೂರ್ಣ ಬೆಂಬಲ ನೀಡಿವೆ. ಎಲ್ಲರೂ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

Key words: Karnataka bandh, August 13,  Vatal Nagaraj, Cauvery dispute