ಡಿ.31ರ ಕರ್ನಾಟಕ ಬಂದ್ ಗೆ ನಮ್ಮ ಬೆಂಬಲವಿಲ್ಲ- ಕರವೇ ಅಧ್ಯಕ್ಷ ಟಿ.ಎ ನಾರಾಯಣ ಗೌಡ

ಬೆಂಗಳೂರು,ಡಿಸೆಂಬರ್,22,2021(www.justkannada.in):  ಎಂಇಎಸ್ ಪುಂಡಾಟಿಕೆ ದೌರ್ಜನ್ಯ ಖಂಡಿಸಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್‌ 31ಕ್ಕೆ ಕರೆ ನೀಡಿರುವ ಕರ್ನಾಟಕ ಬಂದ್‌ ಗೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ ನಾರಾಯಣ ಗೌಡ  ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷ ಟಿ.ಎ ನಾರಾಯಣಗೌಡ,  ಡಿಸೆಂಬರ್ ’31ರ ಕರ್ನಾಟಕ ಬಂದ್‌ ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ . ಬಂದ್‌ಗೆ ಒಂದಷ್ಟು ಯೋಜನೆ ಮಾಡಿಕೊಳ್ಳಬೇಕು. ಈ ರೀತಿ ಏಕಾಏಕಿ ಪ್ರತಿಭಟನೆ ಮಾಡಿದರೆ, ಜನರಿಗೆ ತೊಂದರೆ ಆಗುತ್ತೆ. ಹಾಗಾಗಿ ನಾಳಿನ ಕರವೇ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿ ಪುಂಡಾಟ ಮೆರೆದಿರುವ ಎಂಇಎಸ್ ನಿಷೇಧಕ್ಕೆ ರಾಜ್ಯಾದ್ಯಂತ ಆಗ್ರಹ ಕೇಳಿಬಂದಿದ್ದು ಕನ್ನಡ ಪರ ಹೊರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ನಡೆದ ವಿವಿಧ ಸಂಘಟನೆಗಳ ಸಭೆಯಲ್ಲಿ ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್ ಮಾಡಲು ನಿರ್ಧರಿಸಲಾಗಿದೆ.

Key words:  Karnataka bandh –not- Our support- Karave President -TA Narayana Gowda