ನಾಳೆ ಕರ್ನಾಟಕ ಬಂದ್ : ಸಾರಿಗೆ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ.

ಬೆಂಗಳೂರು,ಸೆಪ್ಟಂಬರ್,28,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ವಿವಿಧ ಸಂಘಟನೆಗಳು ಸಂಸ್ಥೆಗಳು ಬೆಂಬಲ ಸೂಚಿವೆ. ಈ ಮಧ್ಯೆ ನಾಳೆ ಸಾರಿಗೆ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ.

ನಾಳೆ ಎಲ್ಲಾ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಅನಗತ್ಯವಾಗಿ ರಜೆ ಹಾಕಿದ್ರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಎಂಟಿಸಿ, ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ ಎನ್ನಲಾಗಿದೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯಗಳು ಭರ್ತಿಯಾಗಿಲ್ಲ. ಇದರಿಂದಾಗಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಇದೆ.   ಈ ನಡುವೆಯೋ ಕಾವೇರಿ ನದಿ ವ್ಯಾಪ್ತಿಯ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದ್ದು ಈ ಆದೇಶದ ವಿರುದ್ದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

Key words: Karnataka bandh- tomorrow-Notice – compulsory attendance – transport staff.