Saturday, August 22, 2026

BDA Apartments

Home Front Page ಎಲ್ಲಿದೆ, ಎಲ್ಲಿಲ್ಲ : ಸೋಮವಾರದ ಬಳಿಕ ರಾಜ್ಯದಲ್ಲಿನ LOCK DOWN ನ ಸಂಪೂರ್ಣ ವಿವರ ಹೀಗಿದೆ..

ಎಲ್ಲಿದೆ, ಎಲ್ಲಿಲ್ಲ : ಸೋಮವಾರದ ಬಳಿಕ ರಾಜ್ಯದಲ್ಲಿನ LOCK DOWN ನ ಸಂಪೂರ್ಣ ವಿವರ ಹೀಗಿದೆ..

ಬೆಂಗಳೂರು, ಜೂ.19, 2021 : (www.justkannada.in news ) ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ ಶೇ 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.

ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದು, ಅದರ ವಿವರ ಹೀಗಿದೆ..

jk

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.
ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.
ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.
ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.
ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.
ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ 5 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.
ಶೇ. 10 ಕ್ಕಿಂತ ಹೆಚ್ಚಿನ ಪಾಜಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

CM BS Yeddyurappa –warning- against-transport- workers- strike

ರಾಜ್ಯವ್ಯಾಪಿ ಅನ್ವಯವಾಗುವಂತೆ:

ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.
ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
ಬಸ್‌ ಸಂಚಾರವು ಶೇ. 50 ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅನುಮತಿಸಿದೆ.
ಹೋಟೇಲ್ ಕ್ಲಬ್ ರೆಸ್ಟೋರಂಟ್ ಗಳಲ್ಲಿ‌ಕುಳಿತು ತಿನ್ನುವುದಲ್ಲೆ ಶೇ ೫೦ ಸಾಮರ್ಥ್ಯದಲ್ಲಿ ಕೆಲಸ ಮಾಡಲು ಅವಕಾಶ, ಚಲನಚಿತ್ರ,ಹೊರಾಂಗಣ ಚಿತ್ರೀಕರಣಕ್ಕೆ ಅನುಮತಿ. ಬಸ್, ಮೆಟ್ರೋ ಓಡಾಟಕ್ಕೆ ಶೇ ೫೦% ಅನುಮೋದನೆ. ತಾಂತ್ರಿಕಾ ಸಲಹಾ ಸಮಿತಿ ಸಲಹೆ ಮೇರೆಗೆ ತೀರ್ಮಾನ ಕೈಗೊಳ್ಳಾಗಿದೆ.
ಉತ್ತರ ಕನ್ನಡ,ಮಂಡ್ಯ, ಕೊಪ್ಪಳ, ತುಮಕೂರು,ಕೋಲಾರ ಬೆಂಗಳುರ ನಗರ,ಗದಗ ರಾಯಚೂರು, ಬಾಗಲಕೋಟೆ , ಹಾವೇರಿ,ಯಾದಗಿರಿ,ಬೀದರ್ ಜಿಲ್ಲೆಗಳಿಗೆ ಸಡಿಲಿಕೆ ಮಾಡಲು ತೀರ್ಮಾನ.
ಈಜುಕೊಳ, ರಾಜಕೀಯ ಕಾರ್ಯಕ್ರಮ, ಪೂಜಾ ಸ್ಥಳ, ಶಿಕ್ಷಣ ಸಂಸ್ಥೆಗಳು,ಸಿನಿಮಾ,‌ಮಾಲ್‌ಗಳು, ಪಬ್ ಗಳ ಮೇಲೆ ನಿರ್ಬಂಧ ಮುಂದುವರಿಕೆ.


ಮೈಸೂರಿನಲ್ಲಿ ನಿರ್ಬಂದ ಮುಂದವರೆಯಲಿದೆ.
ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಯಲ್ಲಿದೆ.ಶನಿವಾರ ಭಾನುವಾರ ವಾರಾಂತ್ಯ ಕರ್ಪ್ಯೂ
ಲಾಡ್ಜ್ ಮತ್ತು ಜಿಮ್ ಗಳಲ್ಲಿ ಹವಾ ನಿಯಂತ್ರಣವಿಲ್ಲದೆ ಅವಕಾಶ ನೀಡಲಾಗಿದೆ.ಹಾಸನ ದಕ್ಷಿಣ ಕನ್ನಡ,ಚಿತ್ರದುರ್ಗ ಸೇರಿದಂತೆ ಸಡಿಲಿಕೆ ಇಲ್ಲ
ನಿರ್ಬಂಧಗಳ ಹಿನ್ನಲೆಯಲ್ಲಿ ಸಡಿಲಿಕೆ ಮಾಡಲಾಗಿದೆ. ಮಾಸ್ಕ್, ಅಂತರ ಕಾಯ್ದುಕೊಂಡು ಜನರು ಸಹಕಾರ ನೀಡಿ ಸಂಪೂರ್ಣ ಬೆಂಬಲ ನೀಡ ಎಂದು ಮನವಿ ಮಾಡಿದ ಮುಖ್ಯಮಂತ್ರಿ, ಮೂರನೆ ಅಲೆ ಸಂಬಂಧ ಕಾದು ನೋಡೋಣ. ಈಗಾಗಲೆ ಪರಿಸ್ಥಿತಿ ಬಿಗಡಾಯಿಸಿರುವ ಹಿನ್ನಲೆಯ ಸಡಿಲಿಕೆ ಮಾಡಲಾಗಿದೆ. ಜುಲೈ ೫ ತನಕ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದರು.

 

key words : karnataka-bangalore-lock.down-cm-yadiyurappa-press-meet-details