Sunday, August 16, 2026

BDA Apartments

Home Front Page ನೆರೆ ಸಂತ್ರಸ್ತರ ಕೂಗು ಕೇಳದ ರಾಜ್ಯ ಸರ್ಕಾರ ಸತ್ತು ಹೋಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೊಶ

ನೆರೆ ಸಂತ್ರಸ್ತರ ಕೂಗು ಕೇಳದ ರಾಜ್ಯ ಸರ್ಕಾರ ಸತ್ತು ಹೋಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೊಶ

ಚಿಕ್ಕಮಗಳೂರು, ಅಕ್ಟೋಬರ್, 06, 2019 (www.justkannada.in): ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ ಕೇಂದ್ರ ಸರ್ಕಾರ ಪರಿಹಾರ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಜಿಲ್ಲೆಯ ಕಳಸದ ಎಸ್.ಕೆ.ಮೇಗಲ್,ಕಾರ್ಗದ್ದೆ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ರೈತ ಚಂದ್ರೇಗೌಡ,ಚೆನ್ನಪ್ಪ ಗೌಡರ ಮನೆಗೆ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

ರಾಜ್ಯ ಸರ್ಕಾರ ಸತ್ತು ಹೋಗಿದೆ. ಇದು ಬೇಜಾವಾಬ್ದಾರಿ ಸರ್ಕಾರ ಹಾಗೂ ಜನ ವಿರೋಧಿ ಸರ್ಕಾರ. ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಅಂದರೆ ಈ ಸರ್ಕಾರವನ್ನು ಕಿತ್ತು ಎಸೆಯಬೇಕು ಎಂದು ಅವರು ತೀವ್ರ ವಾಗ್ದಾಳಿ ನಡೆಸಿದರು.