Tuesday, August 25, 2026

BDA Apartments

Home Front Page ಸಿದ್ದರಾಮೋತ್ಸವಕ್ಕೆ ಸೆಡ್ಡು: ಕಲಬುರಗಿಯಲ್ಲಿ ಬಿಜೆಪಿ ಒಬಿಸಿ ಬೃಹತ್ ಸಮಾವೇಶ

ಸಿದ್ದರಾಮೋತ್ಸವಕ್ಕೆ ಸೆಡ್ಡು: ಕಲಬುರಗಿಯಲ್ಲಿ ಬಿಜೆಪಿ ಒಬಿಸಿ ಬೃಹತ್ ಸಮಾವೇಶ

ಬೆಂಗಳೂರು, ಅಕ್ಟೋಬರ್ 30, 2022 (www.justkannada.in): ಚುನಾವಣೆ ಸಮೀಪಿಸುತ್ತಿರುವ ಬೆ್ನ್ನಲ್ಲೆ ಬಿಜೆಪಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಬೃಹತ್ ಸಮಾವೇಶ ಆಯೋಜಿಸಿದ್ದು, ಇದಕ್ಕಾಗಿ ಕಲಬುರಗಿ ಸಜ್ಜಾಗಿದೆ.

ಸಮಾವೇಶಕ್ಕೆ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನ ಹರಿದುಬರುವ ನಿರೀಕ್ಷೆ ಇದ್ದು, ಕಲ್ಯಾಣ ಕರ್ನಾಟಕದ ಹೆಬ್ಬಾಗಿಲಿನಲ್ಲಿ ವಿರಾಟ್ ಶಕ್ತಿ ಪ್ರದರ್ಶನ ನಡೆಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದಾರೆ.

ದಾವಣಗೆರೆಯಲ್ಲಿ ಜರುಗಿದ ಸಿದ್ದರಾಮೋತ್ಸವಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಿಂದುಳಿದ ವರ್ಗದವರನ್ನು ತನ್ನತ್ತ ಸೆಳೆಯಲು ಬಿಜೆಪಿ ನಾಯಕರು ಕಾರ್ಯತಂತ್ರ ರೂಪಿಸಿದ್ದಾರೆ.

ಒಬಿಸಿ ಸಮಾವೇಶ ಸಂಬಂಧ ರಾಜ್ಯದ ಎಲ್ಲ ಜಿಲ್ಲೆಗಳ 312 ಬಿಜೆಪಿ ಮಂಡಲಗಳಲ್ಲಿ ಒಂದು ಸಾವಿರಕ್ಕೂ ಅಧಿಕ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದೆ.