Friday, September 18, 2026

BDA Apartments

ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು BDA JK_Adv BD...
Home Front Page ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ತ್ರಿಪುರ,ಜನವರಿ,30,2024(www.justkannada.in):  ಕರ್ನಾಟಕದ ಕ್ರಿಕೆಟ್ ಆಟಗಾರ ಮಯಾಂಕ್ ಅಗರ್ವಾಲ್ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದು  ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಯಾಂಕ್ ಅಗರ್ವಾಲ್  ರಣಜಿಯಲ್ಲಿ ಕರ್ನಾಟಕ ತಂಡವನ್ನ ಮುನ್ನಡೆಸುತ್ತಿದ್ದು, ತ್ರಿಪುರಾದಲ್ಲಿ ಪಂದ್ಯ ಆಡಲು ತೆರಳಿದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.  ತ್ರಿಪುರಾದಲ್ಲಿ ಅಸ್ವಸ್ಥಗೊಂಡ ಕಾರಣ, ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.ಕರ್ನಾಟಕ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅಸ್ವಸ್ಥ agarval

ತ್ರಿಪುರಾಗೆ ವಿಮಾನದಲ್ಲಿ ತೆರಳುತ್ತಿದ್ದ ವೇಳೆ ನೀರು ಕುಡಿಯುತ್ತಿದ್ದಾಗ  ಮಯಾಂಕ್ ಅಗರ್ವಾಲ್ ದಿಢೀರ್ ಅಸ್ವಸ್ಥರಾಗಿದ್ದು,  ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Karnataka cricketer -Mayank Agarwal –ill- admitted – hospital.