ಐಪಿಎಸ್ ಅಧಿಕಾರಿಗಳ ಕಾನೂನುಬಾಹಿರ ನಿಯೋಜನೆ : ಕೇಂದ್ರ ಗೃಹಸಚಿವಾಲಯದಿಂದ ಕ್ರಮಕ್ಕೆ ಸೂಚಿಸಿ ರಾಜ್ಯದ ಮುಖ್ಯಕಾರ್ಯದರ್ಶಿಗೆ ಪತ್ರ..!

karnataka-cs-ips

 

ಬೆಂಗಳೂರು, ಮಾರ್ಚ್ ೧೪, ೨೦೨೨ (www.justkannad.ain): ಐಪಿಎಸ್ ಅಧಿಕಾರಿಗಳ ನಿಯೋಜನೆಯಲ್ಲಿ ಕಾನೂನು ಉಲ್ಲಂಘನೆ ಆರೋಪದ ಕುರಿತು ಸೂಕ್ತ ಕ್ರಮಕ್ಕೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕೇಂದ್ರ ಗೃಹಸಚಿವಾಲಯ ಪತ್ರ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಿವಾಸಿ ಎ.ರಮೇಶ್ ಎನ್ನುವವರು ಇತ್ತೀಚೆಗೆ ಪೋಲಿಸ್ ಇಲಾಖಾ ಅಧಿಕಾರಿಗಳ ನಿಯೋಜನೆಯಲ್ಲಿ ಆಗಿರುವ ಉಲ್ಲಂಘನೆ ಬಗ್ಗೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯದಿಂದ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಸೂಕ್ತ ಕ್ರಮಕ್ಕೆ ಸೂಚಿಸಲಾಗಿದೆ.

ಎ.ರಮೇಶ್ ತಮ್ಮ ಪತ್ರದಲ್ಲಿ ಪೋಲಿಸ್ ಇಲಾಖೆಯಲ್ಲಿ ಆಗಿರುವ ಉಲ್ಲಘನೆಯ ಕುರಿತು ದೂರಿದ್ದು ವಿವರಗಳು ಇಂತಿವೆ:
ಪೋಲಿಸ್ ಇಲಾಖೆಯ ಐಪಿಎಸ್ ದರ್ಜೆಯ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕೆಎಸ್‌ಡಿಸಿಎಲ್); ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (ಎಂಎಸ್‌ಐಎಲ್), ಸಾರಿಗೆ ಇಲಾಖೆ, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ವ್ಯವಸ್ಥಾಪಕ ನಿರ್ದೇಶಕರು/ ಆಯುಕ್ತರಾಗಿ ನಿಯೋಜಿಸಿರುವುದು ಕಾನೂನು ಉಲ್ಲಂಘನೆ ಎಂದು ದೂರಲಾಗಿದೆ.

ಪೋಲಿಸ್ ಅಧಿಕಾರಿಗಳ ವರ್ಗಾವಣೆ/ನಿಯೋಜನೆ ವಿಚಾರ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ಕಾರಣದಿಂದಾಗಿ ಈ ನಿಯೋಜನೆಗಳು ಕಾನೂನು ಬಾಹಿರವಾಗಿದ್ದು, ಈ ಕೂಡಲೇ ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

 

key words : karnataka-cs-ips