ಉನ್ನತ ಶಿಕ್ಷಣ ಅಭಿವೃದ್ಧಿಗೆ ‘ಅಜೆಂಡಾ’ ಸಿದ್ಧಪಡಿಸಿ : ವಿಶ್ರಾಂತ ಕುಲಪತಿಗಳ ವೇದಿಕೆಗೆ ಸಲಹೆ ನೀಡಿದ ಸಿಎಂ

Karnataka-former-vice.chancellors-forum-meet-cm-Bangalore-prof.k.s.rangappa

 

ಬೆಂಗಳೂರು, ಜ.10, 2022 : (www.justkannada.in news) : ವಿಜ್ಞಾನ, ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯಸೂಚಿಯೊಂದನ್ನು ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ಮಾಡಿದರು.

ಕರ್ನಾಟಕ ರಾಜ್ಯ ವಿಶ್ರಾಂತ ಕುಲಪತಿಗಳ ವೇದಿಕೆ ಅಧ್ಯಕ್ಷರಾದ ಪ್ರೊ.ಕೆ.ಎಸ್. ರಂಗಪ್ಪ ನೇತೃತ್ವದ ಫೋರಂನ ಸದಸ್ಯರು ಇಂದು ಮಧ್ಯಾಹ್ನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸಿದರು. ಈ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಈ ಸಲಹೆ ನೀಡಿದರು. ಮುಖ್ಯಮಂತ್ರಿಗಳ ಭೇಟಿ ಸಂಬಂಧ ಮಾಹಿತಿ ನೀಡಿದ ಪ್ರೊ.ಕೆ.ಎಸ್.ರಂಗಪ್ಪ ಅವರು ಹೇಳಿದಿಷ್ಟು…

ರಾಜ್ಯದಲ್ಲಿನ ಉನ್ನತ ಶಿಕ್ಷಣ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಗೆ ಪೂರಕವಾಗಿ ಅಗತ್ಯವಿರುವ ಬದಲಾವಣೆಗಳಿಗೆ ಸಂಬಂಧಿಸಿದಂತೆ ವಿಶ್ರಾಂತ ಕುಲಪತಿಗಳ ವೇದಿಕೆ ಚರ್ಚಿಸಿ ಸಮಗ್ರ ವರದಿಯೊಂದನ್ನು ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಲಿ. ಈ ವರದಿಯನ್ನು ಆಧಾರಿಸಿ ರಾಜ್ಯ ಸರಕಾರ ಅಗತ್ಯ ಬದಲಾವಣೆಗಳನ್ನು ಮಾಡಲಿದೆ.

ವಿಶ್ರಾಂತ ಕುಲಪತಿಗಳ ವೇದಿಕೆ ಜತೆ ಸಂಪರ್ಕದಲ್ಲಿದ್ದು ಶಿಕ್ಷಣ ಕ್ಷೇತ್ರದಲ್ಲಿನ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಿ ಸಲಹೆ, ಸೂಚನೆಗಳನ್ನು ಜಾರಿಗೊಳಿಸಲು ಬದ್ಧವಾಗಿರುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಆಶ್ವಾಸನೆ ನೀಡಿದರು. ಜತೆಗೆ ಇದೇ ವೇಳೆ ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯಗಳನ್ನು ಮೇಲ್ದರ್ಜೆಗೇರಿಸುವ ಸಂಬಂಧ ಚರ್ಚಿಸಿದರು.

ಈ ಭೇಟಿ ವೇಳೆ ಕರ್ನಾಟಕ ರಾಜ್ಯ ವಿಶ್ರಾಂತ ಕುಲಪತಿಗಳ ವೇದಿಕೆಯ ಸದಸ್ಯರಾದ ಪ್ರೊ.ಎಸ್.ಎನ್.ಹೆಗ್ಡೆ, ಪ್ರೊ.ನಿರಂಜನ, ಪ್ರೊ.ನಾರಾಯಣಗೌಡ, ಪ್ರೊ.ಶ್ರೀನಿವಾಸಗೌಡ ಹಾಜರಿದ್ದರು.

 

key words : Karnataka-former-vice.chancellors-forum-meet-cm-Bangalore-prof.k.s.rangappa