ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯಪಾಲರ ಅಂಕಿತ

ಬೆಂಗಳೂರು, ಆಗಸ್ಟ್ 01, 2020 (www.justkannada.in): ಕರ್ನಾಟಕದಲ್ಲೂ ಕೈಗಾರಿಕಾ ವ್ಯಾಜ್ಯ ಗಳ ಕಾಯ್ದೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಒಪ್ಪಿಗೆ ನೀಡಿದ್ದಾರೆ.

ಈ ಕಾಯ್ದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನ ಕೈಗೊಂಡಿತ್ತು.

ಕಾರ್ಮಿಕ ಸಂಘಟನೆಗಳು, ವಿರೋಧ ಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ಹೊರಡಿಸಿದ್ದ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ.

ಹೊಸ ತಿದ್ದುಪಡಿ ಕಾಯ್ದೆ ಪ್ರಕಾರ ವಿದ್ಯುತ್ ಸೌಲಭ್ಯದ ಜತೆಗೆ ಕನಿಷ್ಠ 10 ಕಾರ್ಮಿಕರಿರುವ ಕಾರ್ಖಾನೆಯ ಬದಲು 20 ಕಾರ್ಮಿಕರಿರುವುದನ್ನು ಕಾರ್ಖಾನೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ.