Sunday, August 23, 2026

BDA Apartments

Home Front Page ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯ- ರಾಜ್ಯ ಕಾಂಗ್ರೆಸ್ ಟ್ವೀಟ್.

ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯ- ರಾಜ್ಯ ಕಾಂಗ್ರೆಸ್ ಟ್ವೀಟ್.

ಬೆಂಗಳೂರು,ಸೆಪ್ಟಂಬರ್,23,2023(www.justkannada.in):  ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ರಾಜ್ಯ ಕಾಂಗ್ರೆಸ್ ಘಟಕ ಲೇವಡಿ ಮಾಡಿದೆ.

ನಿನ್ನೆ ಅಧಿಕೃತವಾಗಿ ಎನ್ ಡಿಎ  ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಿದ್ದು ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್ ಘಟಕ,   ಬಿಜೆಪಿ ಸಂವಿಧಾನದ ಪೀಠಿಕೆಯಿಂದ ಜಾತ್ಯಾತೀತತೆಯನ್ನು ಕಿತ್ತು ಹಾಕಿದೆ. ಜೆಡಿಎಸ್ ತನ್ನ ಹೆಸರಿನಲ್ಲಿದ್ದ ಜಾತ್ಯಾತೀತತೆಯನ್ನು ಅನಧಿಕೃತವಾಗಿ ಕಿತ್ತು ಹಾಕಿದೆ.

ಜೆಡಿಎಸ್​ನಲ್ಲಿನ ಅಲ್ಪಸಂಖ್ಯಾತ ಮುಖಂಡರು ಪಕ್ಷದ ಹೊಸಿಲಿನ ಹೊರಗೆ ಕಾಲಿಟ್ಟಿದ್ದಾರೆ, ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ಕನಸು ನನಸಾಗುವ ಕಾಲ ಬಂದಿದೆ. ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

Key words:  Karnataka- JDS –BJP-Alliance-congress-tweet