Saturday, November 7, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯ

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಪುಸ್ತಕಗಳು ಲಭ್ಯ

ಬೆಂಗಳೂರು, ಜೂನ್‌ ,11,2025 (www.justkannada.in):  ಪತ್ರಿಕೋದ್ಯಮಕ್ಕೆ ಹಾಗೂ ಮಾಧ್ಯಮ ಜಗತ್ತಿಗೆ ಸಂಬಂಧಿಸಿದ 40 ಕ್ಕೂ ಹೆಚ್ಚು ಪುಸ್ತಕಗಳು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ರಿಯಾಯಿತಿ ದರದಲ್ಲಿ ಮಾರಾಟಕ್ಕೆ ಲಭ್ಯವಿದ್ದು, ಆಸಕ್ತರು, ವಿಶೇಷವಾಗಿ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅವರು ತಿಳಿಸಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿಯು ಕೆಲವು ದಶಕಗಳಿಂದ ಹಲವಾರು ಪುಸ್ತಕಗಳನ್ನು ಪ್ರಕಟಿಸಿದ್ದು, ಮಾರಾಟಕ್ಕೆ ಲಭ್ಯವಿವೆ. ಹಿರಿಯ ಪತ್ರಕರ್ತರು, ಪರಿಣತರು ಬರೆದಿರುವ ಈ ಪುಸ್ತಕಗಳು ಯುವ ಪತ್ರಕರ್ತರು ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿವೆ. ಈ ಪುಸ್ತಕಗಳ ಮೇಲೆ ಶೇ. 20 ರ ವರೆಗೆ ರಿಯಾಯಿತಿಯೂ ನೀಡಲಾಗುತ್ತಿದೆ.

ಆಸಕ್ತರು ಪುಸ್ತಕಗಳ ಕುರಿತ ಮಾಹಿತಿಯನ್ನು X, instagram ಮತ್ತು ಫೇಸ್ ಬುಕ್ ಗಳಲ್ಲಿನ ಅಕಾಡೆಮಿಯ ಖಾತೆ @karmediaacademy/ Karnataka Media Academy ಗಳಲ್ಲಿ ಪಡೆಯಬಹುದಾಗಿದೆ.  ಪತ್ರಿಕೋದ್ಯಮ ಬೋಧಿಸುವ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳ ಗ್ರಂಥಾಲಯಗಳಿಗೆ ಸಗಟು ಖರೀದಿ ಮಾಡಲು ಬಯಸುವವರು ಅಕಾಡೆಮಿಯ ಕಚೇರಿಯನ್ನು ದೂರವಾಣಿ ಸಂಖ್ಯೆ 080 22860264 ನಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಆಯೇಶಾ ಖಾನಂ ಅವರು ತಿಳಿಸಿದ್ದಾರೆ.vtu

Key words: Books, discount, prices, Karnataka Media Academy