Sunday, September 20, 2026

BDA Apartments

ಜನವರಿ 6ರಂದು ನೂತನ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಕಾರ್ಯಕ್ರಮ BDA JK_Adv BDA Adv
Home Front Page ಜನವರಿ 6ರಂದು ನೂತನ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಕಾರ್ಯಕ್ರಮ

ಜನವರಿ 6ರಂದು ನೂತನ ವಿಧಾನ ಪರಿಷತ್ ಸದಸ್ಯರ ಪ್ರಮಾಣವಚನ ಕಾರ್ಯಕ್ರಮ

ಬೆಂಗಳೂರು, ಜನವರಿ 02, 2021 (www.justkannada.in): ನೂತನ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದಂತ ಸದಸ್ಯರಿಗೆ ಪ್ರಮಾಣ ವಚನ ಸ್ವೀಕರಿಸೋದಕ್ಕೆ ದಿನಾಂಕ ನಿಗದಿ ಪಡಿಸಲಾಗಿದೆ.

ವಿಧಾನ ಪರಿಷತ್ ನ ಉಪ ಕಾರ್ಯದರ್ಶಿ ಬಿಎ ಬಸವರಾಜ ಈ ಸಂಬಂಧ ಮಾಹಿತಿ ನೀಡಿದ್ದಾರೆ. ಜನವರಿ 06ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ 25 ನೂತನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ನೂತನ ಪರಿಷತ್ ಸದಸ್ಯರು, ಚುನಾವಣಾ ಆಧಿಕಾರಿಯವರು ನೀಡಿರುವ ಪ್ರಮಾಣ ಪತ್ರದೊಂದಿಗೆ ಆಗಮಿಸಿ, ಪ್ರಮಾಣ ವಚನ ಸ್ವೀಕರಿಸುವಂತೆ ಪತ್ರದಲ್ಲಿ ಆಹ್ವಾನಿಸಲಾಗಿದೆ.

25 ಕ್ಷೇತ್ರಗಳಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಜೆಡಿಎಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದೊಂದು ಕ್ಷೇತ್ರದಲ್ಲಿ ಸಾಧಿಸಿದ್ದರು.