ಮೈಸೂರು ವಿವಿಯಲ್ಲಿನ ಅಕ್ರಮಗಳ ಬಗ್ಗೆ ತನಿಖೆಗೆ ಒತ್ತಾಯಿಸಿ ಕರವೇ ಪ್ರತಿಭಟನೆ…

ಮೈಸೂರು,ಆ,8,2019(www.justkannada.in): ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ  ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕ್ರಾಫರ್ಡ್ ಹಾಲ್ ಮುಂಭಾಗ ಜಮಾಯಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈಗಿನ ಕುಲಪತಿಗಳು ರಾಜ್ಯಪಾಲರ ಆದೇಶವನ್ನು ಧಿಕ್ಕರಿಸಿ ಅಕ್ರಮವಾಗಿ ನೇಮಕಾತಿಯನ್ನು ಮಾಡಿದ್ದಾರೆ . ಜೊತೆಗೆ ಈ ಬಾರಿ ಕೊರತೆ ಬಜೆಟ್ ಮಂಡಿಸಿದ್ದಾರೆ. ಇಂತಹ ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

Key words: Karnataka rakshana vedike- protests- demanding -investigation Mysore university- Illegal