ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ ಆರೋಪ.

ನವದೆಹಲಿ,ಜುಲೈ,31,2023(www.justkannada.in): ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ ಕಾಂಗ್ರೆಸ್ ನಾಯಕರು ಭಯೋತ್ಪಾದಕರನ್ನು ರಕ್ಷಣೆ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾಕರಂದ್ಲಾಜೆ ಗಂಭೀರ ಆರೋಪ ಮಾಡಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಕರ್ನಾಟಕ ರಾಜ್ಯ ಭಯೋತ್ಪಾದಕರಿಗೆ ಅಡಗುತಾಣವಾಗುತ್ತಿದೆ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣವೇ ಇದಕ್ಕೆಲ್ಲ ಕಾರಣ. ಕಾರಾಗೃಹಗಳಲ್ಲಿ ಭಯೋತ್ಪಾದನ ಚಟುವಟಿಕೆಗಳು ನಡೆಯುತ್ತಿವೆ. ಯುವಕರು ಐಸಿಎಸ್ ಸೇರಿ ಬೇರೆ ಸಂಘಟನೆಗಳ ಜತೆ ಸಂಪರ್ಕ ಹೊಂದುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕುಕ್ಕ ರ್ ಬಾಂಬ್ ಸ್ಪೋಟ ಆಕಸ್ಮಿಕವಲ್ಲ.  ಕಾಂಗ್ರೆಸ್ ನಾಯಕರು ಈ ಘಟನೆಯನ್ನ ಭಯೋತ್ಪಾದಕ ಕೃತ್ಯವಲ್ಲ ಎಂದಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ  ಎಟಿಎಸ್ ನಿನ್ನೆ ಇಬ್ಬರನ್ನ ಬಂಧಿಸಿದೆ. ಈ ಮೂಲಕ ಮಂಗಳೂರು ಬಾಂಬ್ ಬ್ಲಾಸ್ಟ್ ಕೃತ್ಯ ಬಯಲಾಗಿದೆ ಎಂದು ಶೋಭಾ ಕರಂದ್ಲಾಜೆ ಕಿಡಿಕಾರಿದರು.

Key words: Karnataka State – becoming – hideout -terrorists – Union Minister- Shobha Karandhlaje alleges.