ನವದೆಹಲಿ, ಅಕ್ಟೋಬರ್,22,2026 (www.justkannada.in): ಕಸ್ತೂರಿ ರಂಗನ್ ವರದಿ ವಿಚಾರ ಸಂಬಂಧ ಇಂದು ಕೇಂದ್ರ ಪರಿಸರ, ಅರಣ್ಯ ಸಚಿವ ಭೂಪೇಂದ್ರ ಯಾದವ್ ಅವರನ್ನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಇಂದು ದೆಹಲಿಗೆ ತೆರಳಿರುವ ಸಿಎಂ ಡಿಕೆ ಶಿವಕುಮಾರ್ ನವದೆಹಲಿಯ ಪರಿಸರ ಭವನದಲ್ಲಿ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರನ್ನ ಭೇಟಯಾಗಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕಸ್ತೂರಿ ರಂಗನ್ 7ನೇ ಕರಡು ಅಧಿಸೂಚನೆಯನ್ನು ಅಂತಿಮಗೊಳಿಸದಂತೆ ಮನವಿ ಮಾಡಿದ್ದಾರೆ.
ಕರ್ನಾಟಕದ ಪ್ರಮುಖ ಯೋಜನೆಗಳಾದ ಶರಾವತಿ ಪಂಪ್ಡ್ ಸ್ಟೋರೇಜ್ ಹಾಗೂ ಮೇಕೆದಾಟು ಯೋಜನೆಗಳಿಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸ್ಥಾಯಿ ಸಮಿತಿ ಅನುಮೋದನೆ ನೀಡಬೇಕು ಹಾಗೂ ಕಸ್ತೂರಿ ರಂಗನ್ ವರದಿ ವಿಚಾರವಾಗಿ ಭೌತಿಕ ಸಮೀಕ್ಷೆ ಪೂರ್ಣಗೊಳ್ಳುವವರೆಗೆ ಕರಡು ಅಧಿಸೂಚನೆಗೆ ತಡೆ ನೀಡಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
Kasturirangan Report, CM, DK Shivakumar, urge, Union Minister, not, finalize, 7th draft notification






