ಎಂಗೇಜ್​ಮೆಂಟ್​ ಸುದ್ದಿಗೆ ಸ್ಪಷ್ಟನೆ ಕೊಟ್ಟ ಕತ್ರಿನಾ

ಬೆಂಗಳೂರು, ಆಗಸ್ಟ್ 19, 2021 (www.justkannada.in): ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್ ಎಂಗೇಜ್​ಮೆಂಟ್​ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು.

ಈ ಕುರಿತು ಕತ್ರಿನಾ ಸ್ಪಷ್ಟನೆ ನೀಡಿದ್ದಾರೆ. ಎಂಗೇಜ್ ಮೆಂಟ್ ಸುದ್ದಿಯಲ್ಲಿ ಹುರುಳಿಲ್ಲ ಎಂದು ಕತ್ರಿನಾ ತಂಡ ಸ್ಪಷ್ಟಪಡಿಸಿದೆ.

ವಿಕ್ಕಿ ಹಾಗೂ ಕತ್ರಿನಾ ಸೈಲೆಂಟ್​ ಆಗಿ ಎಂಗೇಜ್​ಮೆಂಟ್​ ಮಾಡಿಕೊಂಡಿದ್ದಾರೆ ಎನ್ನುವ ಸುದ್ದಿಯನ್ನು ಕೆಲವು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು.

ಈ ಹಿಂದೆಯೂ ವಿಕ್ಕಿ ಕೌಶಲ್​ ಹಾಗೂ ಕತ್ರಿನಾ ಕೈಫ್​ ಒಟ್ಟಾಗಿ ಸಾಕಷ್ಟು ಬಾರಿ ಕಾಣಿಸಿಕೊಂಡಿದ್ದರು. ಆದರೆ, ಮದುವೆ, ಎಂಗೇಜ್’ಮೆಂಟ್ ಸುದ್ದಿಗಳನ್ನು ಇಬ್ಬರೂ ಅಲ್ಲಗಳೆದಿದ್ದರು.