ಕಾವೇರಿ ನದಿ ನೀರು ವಿವಾದ: ಕೋರ್ಟ್ ತೀರ್ಮಾನಕ್ಕೆ ಎಲ್ಲರೂ ಬದ್ದ- ಸಚಿವ ಹೆಚ್.ಸಿ ಮಹದೇವಪ್ಪ

ಮೈಸೂರು,ಆಗಸ್ಟ್,21,2023(www.justkannada.in): ಈ ಬಾರಿ ವಾಡಿಕೆಗಿಂತ ಕಡಿಮೆ ಮಳೆಯಾದ ಹಿನ್ನೆಲೆ  ಕಾವೇರಿ ನದಿ ನೀರು ವಿವಾದ ಮತ್ತೆ ಭುಗಿಲೆದ್ದಿದ್ದು ಈ ಕುರಿತು ಮಾತನಾಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್,ಸಿ ಮಹದೇವಪ್ಪ, ಕೋರ್ಟ್ ತೀರ್ಮಾನಕ್ಕೆ ಎಲ್ಲರೂ ಬದ್ದರಿದ್ದೇವೆ. ಬರದ ಪರಿಸ್ಥಿತಿಯಲ್ಲಿ ಎಲ್ಲರೂ ಸಂಕಷ್ಟವನ್ನ ಹಂಚಿಕೊಳ್ಳಬೇಕಿದೆ ಎಂದಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಹೆಚ್.ಸಿ ಮಹದೇವಪ್ಪ, ಕಾವೇರಿ ಕರ್ನಾಟಕದ ಉಸಿರು. ನೂರಾರು ವರ್ಷಗಳಿಂದ ಮದ್ರಾಸ್ ಪ್ರಾಂತ್ಯ ಇದ್ದಾಗಿನಿಂದಲೂ ನಮಗೂ ತಮಿಳುನಾಡಿಗೂ ವ್ಯಾಜ್ಯ ನಡೆಯುತ್ತಲೇ ಇದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಯಾರ್ ಯಾರಿಗೆ ಎಷ್ಟೆಷ್ಟು ನೀರು ಹಂಚಿಕೆ ಎಂಬುದು ತೀರ್ಮಾನವಾಗಿದೆ. ಕೋರ್ಟ್ ತೀರ್ಮಾನಕ್ಕೆ ಎಲ್ಲರು ಬದ್ದರಿದ್ದೇವೆ. ಬರದ ಪರಿಸ್ಥಿತಿಯಲ್ಲಿ ಎಲ್ಲರು ಸಂಕಷ್ಟವನ್ನ ಹಂಚಿಕೊಳ್ಳಬೇಕಿದೆ.

ರಾಜ್ಯದಲ್ಲಿ ಕಡಿಮೆ ಮಳೆ ಬಿದ್ದಿದೆ, ನೀರಿನ ಸಂಗ್ರಹ ಕಡಿಮೆ ಇದೆ. ಕಟ್ಟು ಮಾದರಿಯಲ್ಲಿ ನೀರು ನೀಡಬೇಕೆಂದು ನೀರಾವರಿ ಸಲಹಾ ಸಮಿತಿ ತೀರ್ಮಾನಿಸಿದೆ. ಈಗ ಆಪತ್ ಕಾಲವಿದ್ದು, ನೀರು ಹಂಚಿಕೆ ಕುರಿತು ಕೋರ್ಟಿನ ತೀರ್ಮಾನವಿದೆ. ವೈಯಕ್ತಿಕ ಹಿತಾಶಕ್ತಿಯಿಂದ ಯಾವುದೇ ಸರ್ಕಾರ ಕೆಲಸ ಮಾಡಲ್ಲ. ರಾಜ್ಯದ ರೈತರ ಹಿತೈದೃಷ್ಟಿಯಿಂದಲೇ ಕೆಲಸ ಮಾಡಬೇಕು. ಇದರಲ್ಲಿ ರಾಜಕೀಯ ಬೇಯಿಸುವ ಅಗತ್ಯವಿಲ್ಲ ಎಂದು ಸಚಿವ ಡಾ ಹೆಚ್ ಸಿ ಮಹದೇವಪ್ಪ ಹೇಳಿದರು.

Key words: Kaveri –river- water- dispute-court’s –decision-Minister -HC Mahadevappa