ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ಡಿ.12ಕ್ಕೆ ಮತದಾನ…

ಬೆಂಗಳೂರು,ನ,25,2019(www.justkannada.in):  ರಾಜ್ಯದಿಂದ ಒಂದು ಸ್ಥಾನಕ್ಕೆ ನಡೆಯುವ ರಾಜ್ಯಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು ಡಿಸೆಂಬರ್ 12 ರಂದು ಮತದಾನ ನಡೆಯಲಿದೆ.

ಕೆ. ಸಿ ರಾಮಮೂರ್ತಿ ಅವರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯಸಭಾ ಸ್ಥಾನಕ್ಕಾಗಿ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 2 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಡಿಸೆಂಬರ್ 5 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಡಿಸೆಂಬರ್ 12 ರಂದು ಮತದಾನ ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯಸಭೆಗೆ ಆಯ್ಕೆಯಾಗಿದ್ದ ಕೆ.ಸಿ ರಾಮಮೂರ್ತಿ ಅವರು  ಇತ್ತೀಚೆಗೆ ತಮ್ಮ ಸ್ಥಾನ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ರಾಮಮೂರ್ತಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

Key words: KC ramamurthi- Rajya Sabha- Election -Notification -Announced.