Tuesday, August 4, 2026

BDA Apartments

Home Front Page ದೇಶದಲ್ಲಿ ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗಲ್ಲ – ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು

ದೇಶದಲ್ಲಿ ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗಲ್ಲ – ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು

ಚಿತ್ರದುರ್ಗ, ಜನವರಿ, 13,2025 (www.justkannada.in):  ಈ ದೇಶದಲ್ಲಿ ಮಠಾಧೀಶರು, ರಾಜಕಾರಣಿಗಳು ಇರುವವರೆಗೂ ಜಾತಿ ನಿರ್ಮೂಲನವಾಗುವುದಿಲ್ಲ ಎಂದು ಹಿರಿಯ ಸಾಹಿತಿ ಡಾ.ಬಿ.ಎಲ್.ವೇಣು ಕಳವಳ ವ್ಯಕ್ತಪಡಿಸಿದರು.

ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಕೆಂಧೂಳಿ ಪತ್ರಿಕೆಯ 200 ನೇ ಸಂಚಿಕೆ ಬಿಡುಗಡಿ ಮಾಡಿ ಮಾತನಾಡಿದ ಅವರು, ಎಲ್ಲವನ್ನೂ ಜಾತಿಯಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದೆ ಪತ್ರಿಕೆಗಳಲ್ಲಿ ಬರಹಗಾರರಿಗೆ ಸ್ಥಳವಿತ್ತು. ಅದರಲ್ಲೂ ಬಂಡಾಯ ಬರಹಗಾರರಿಗೆ ಜಾಗವಿತ್ತು. ಆದರೆ ಈಗ ಎಲ್ಲವೂ ಜಾತಿಯಿಂದ ಗುರುತಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ..ಈ  ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಿರುವುದೇ ಮಠಾಧೀಶರು ಮತ್ತು ರಾಜಕಾರಣಿಗಳಿಂದ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಕೆಂಧೂಳಿ ಡಿಜಿಟಲ್ ಮೀಡಿಯಾ ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಸುಭಾಷ್ ಹೂಗಾರ್, ಸಾಹಿತಿ ಮತ್ತು ಪತ್ರಕರ್ತ ಆರ್. ಜಿ ಹಳ್ಳಿ ನಾಗರಾಜ್, ವಸತಿ ಸಚಿವರ ಮಾಧ್ಯಮ ಸಲಹೆಗಾರ ಲಕ್ಷ್ಮಿ ನಾರಾಯಣ, ಬಾಲಭವನದ ಅಧ್ಯಕ್ಷ ಬಿ.ಆರ್,ನಾಯ್ಡು, ಕೆಂಧೂಳಿ ವಾರ ಪತ್ರಿಕೆ ಸಂಪಾದಕ ತುರುವನೂರು ಮಂಜುನಾಥ್, ಅರುಣ್ ಕುಮಾರ್ ಪತ್ರಕರ್ತರಾದ ಎಚ್.ಲಕ್ಷ್ಮಣ, ನರೇನಹಳ್ಳಿ ಅರುಣ್ ಕುಮಾರ್ ಉಪಸ್ಥಿತರಿದ್ದರು.

Key words: Kendhuli newspaper, Senior writer, Dr. B.L. Venu