ಕೇರಳ ಸಿಎಂ ಭೇಟಿ: ಕಾಸರಗೋಡು ಕನ್ನಡಿಗರ ಸಮಸ್ಯೆ ಶೀಘ್ರ ಪರಿಹಾರಕ್ಕೆ ಮನವಿ

ಕಾಸರಗೂಡು,ಸೆಪ್ಟಂಬರ್,16,2025 (www.justkannada.in): ಕೇರಳ ಸಿಎಂ ಪಿಣರಾಯಿ ವಿಜಯನ್ ಅವರನ್ನ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಶೈಕ್ಷಣಿಕ ಹಾಗೂ ಉದ್ಯೋಗ ಸಂಬಂಧಿತ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಸಲ್ಲಿಸಲಾಯಿತು.

ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ, ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್, ಎ.ಆರ್. ಸುಬ್ಬಯ್ಯ ಕಟ್ಟೆ, ಸದಸ್ಯರು, ಗಡಿ ಪ್ರಾಧಿಕಾರ ಹಾಗೂ ಇತರೆ ಕನ್ನಡಿಗರು ಉಪಸ್ಥಿತರಿದ್ದರು.

ಹಾಗೆಯೇ ಇದೇ ವೇಳೆ ಬದಿಯಡ್ಕದ ಕಯ್ಯಾರ ಕಿಞ್ಞಣ್ಣ ರೈ ಕನ್ನಡ ಸಾಂಸ್ಕೃತಿಕ ಭವನದ ಉದ್ಘಾಟನೆಗೆ ಕೇರಳದ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದರು.  ಇದೇ ಸಂದರ್ಭದಲ್ಲಿ ಕೇರಳ ವಿಧಾನಸಭೆಯ ಸ್ಪೀಕರ್  ಶಂಶೀರ್  ಹಾಗೂ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕವಿ.ಡಿ ಸತೀಶನ್ ಅವರನ್ನು ಭೇಟಿ  ಮಾಡಿದರು.

ಸಿಎಂ ಪಿಣರಾಯಿ ವಿಜಯನ್ ಅವರ  ಭೇಟಿ ವೇಳೆ ಕಾಸರಗೋಡು ಕನ್ನಡಿಗರ ಪ್ರಮುಖ ಬೇಡಿಕೆಗಳಾದ ರಾಷ್ಟ್ರೀಯ ಹೆದ್ದಾರಿ/ ರೇಲ್ವೆ ಸ್ಟೇಷನ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡ ನಾಮಫಲಕ, ಕೇರಳದ ನೇಮಕಾತಿಗಳಲ್ಲಿ ಭಾಷಾ ಅಲ್ಪಸಂಖ್ಯಾತರಿಗೆ ನಿಯಮಾನುಸಾರ ಮೀಸಲಾತಿ, ರೇಶನ್‌ ಕಾರ್ಡ್‌/ಮತದಾರರ ಗುರುತಿನ ಚೀಟಿಗಳಲ್ಲಿ ಕನ್ನಡ ಭಾಷೆ ಅಳವಡಿಕೆ, ಬದಿಯಡ್ಕದ ಕಯ್ಯಾರ ಕಿಯ್ಯಣ್ಣ ರೈ ಕನ್ನಡ ಭವನಕ್ಕೆ ರಸ್ತೆ ಸಂಪರ್ಕ, ಸಾಂಸ್ಕೃತಿಕ ಸಂಸ್ಥೆಗಳಿಗೆ ಅನುದಾನ, ಕಾಸರಗೋಡು ಜಿಲ್ಲೆಗಳಿಗೆ ಕಡ್ಡಾಯವಾಗಿ ಕನ್ನಡ ಶಿಕ್ಷಕರ ನೇಮಕ, ಪ್ರಭಾಕರನ್‌ ಕಮಿಟಿ ವರದಿ ಅನುಷ್ಠಾನ, ಕಾಸರಗೋಡು ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಇತ್ಯಾದಿ ಬೇಡಿಕೆಗಳನ್ನ ಈಡೇರಿಸುವಂತೆ ಮನವಿ ಪತ್ರ ಸಲ್ಲಿಸಿದರು.

Key words:  Kerala CM, Kasaragodu Kannadiga, Border development authority