ತಮನ್ನಾ, ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್

ಬೆಂಗಳೂರು, ಜನವರಿ 28, 2021 (www.justkannada.in): ನಟಿ ತಮನ್ನಾ ಮತ್ತು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಕೇರಳ ಹೈಕೋರ್ಟ್ ನೋಟಿಸ್ ನೀಡಿದೆ.

ಆನ್ ಲೈನ್ ರಮ್ಮಿ ಗೇಮ್ ನ ಪ್ರಚಾರ ರಾಯಭಾರಿಯಾಗಿರುವ ತಮನ್ನಾ, ವಿರಾಟ್ ಮತ್ತು ಅಜು ವರ್ಗೀಸ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ವಿರಾಟ್ ಕೊಹ್ಲಿ ತಮನ್ನಾ ಇಬ್ಬರನ್ನು ಬಂಧಿಸಿ ಆನ್ ಲೈನ್ ರಮ್ಮಿ ಗೇಮ್ ಬ್ಯಾನ್ ಮಾಡಬೇಕೆಂದು ಮನವಿಯೊಂದಕ್ಕೆ ಸಂಬಂಧಿಸಿ ನೋಟಿಸ್ ನೀಡಲಾಗಿದೆ.

ಆನ್ ಲೈನ್ ಬೆಟ್ಟಿಂಗ್ ಗಂಭೀರ ಸಮಸ್ಯೆ ಎಂದು ಪರಿಗಣಿಸಿರುವ ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟನೆ ನೀಡುವಂತೆ ಕೇಳಿದೆ.