50 ದಿನ ಪೂರೈಸಿ ಹೊಸ ಭಾಷ್ಯ ಬರೆದ ‘ಕೆಜಿಎಫ್ 2’

ಬೆಂಗಳೂರು, ಜೂನ್ 03, 2022 (www.justkannada.in): ಭಾರತೀಯ ಚಿತ್ರರಂಗದಲ್ಲಿ ಹೊಸ ಭಾಷ್ಯ ಬರೆದ ‘ಕೆಜಿಎಫ್ 2’ ಸಿನಿಮಾ ಬಿಡುಗಡೆ ಆಗಿ ಇಂದಿಗೆ 50 ದಿನಗಳನ್ನು ಪೂರೈಸಿದೆ.

‘ಕೆಜಿಎಫ್ ಚಾಪ್ಟರ್ 2 ವಿಶ್ವದಾದ್ಯಂತ 400ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಪೂರೈಸುತ್ತಿದೆ.

ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ನೀಡಿದೆ. ಭಾರತದ ಎಲ್ಲಾ ಪ್ರಮುಖ ಚಿತ್ರರಂಗದಲ್ಲಿಯೂ ಕೆಜಿಎಫ್‌ 2 ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ.

ಕಳೆದ 50 ದಿನಗಳಲ್ಲಿ ಸುಮಾರು ₹1,239.97 ಕೋಟಿಗಳಿಸಿದೆ. ರಾಜ್ಯದಲ್ಲಷ್ಟೇ ಅಲ್ಲದೆ ಹೊರ ರಾಜ್ಯಗಳಲ್ಲೂ ಕೆಜಿಎಫ್‌ 2 ಭರ್ಜರಿ ಕಲೆಕ್ಷನ್‌ ಮಾಡಿದೆ.

ಉತ್ತರ ಭಾರತದ ಬಹುತೇಕ ಎಲ್ಲಾ ಭಾಗಗಳಲ್ಲೂ ಸೂಪರ್‌ ರೆಸ್ಪಾನ್ಸ್ ಸಿಕ್ಕಿದ್ದು ವಿದೇಶದಲ್ಲಿಯೂ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಅದ್ಭುತಗಳಿಕೆ ಕಂಡಿದೆ.