ಬೆಂಗಳೂರು, ಜ.೨೯,೨೦೨೬: ರಾಜ್ಯ ಸರ್ಕಾರ ಖಾದಿ ಬಳಕೆ ಉತ್ತೇಜಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಅದರಂತೆ, ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು “ಸ್ವಯಂ ಪ್ರೇರಣೆಯಿಂದ” ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಉಡುಪನ್ನು ಧರಿಸುವಂತೆ ತಿಳಿಸಿದೆ.
ಈ ಬಗ್ಗೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಇಂದು ಸುತ್ತೋಲೆ ಹೊರಡಿಸಿದ್ದು, ಅದು ಹೀಗಿದೆ..

“ಖಾದಿ” ಕೇವಲ ಒಂದು ಉಡುಪು ಮಾತ್ರವಲ್ಲ, ಅದು ರಾಷ್ಟ್ರದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಪ್ರಸ್ತುತ ಖಾದಿ ನೇಕಾರರು ನೂತನ ಶೈಲಿಯ ವಿನ್ಯಾಸದಲ್ಲಿ ಉಡುಪುಗಳನ್ನು ತಯಾರಿಸಲು ಮುಂದಾಗಿದ್ದಾರೆ. ಅಲ್ಲದೇ, ಖಾದಿ ಉತ್ಪಾದನೆಯು ಗ್ರಾಮೀಣ ಆರ್ಥಿಕತೆಯ ಮೂಲ ಆಧಾರವಾಗಿದ್ದು, ರಾಜ್ಯದ ಸಾವಿರಾರು ಗ್ರಾಮೀಣ ನೂಲುಗಾರರು ಮತ್ತು ನೇಕಾರರಿಗೆ ನೇರ ಹಾಗೂ ಪರೋಕ್ಷವಾಗಿ ಜೀವನೋಪಾಯವನ್ನು ಒದಗಿಸುತ್ತಿದೆ.
ಆದುದರಿಂದ, 77ನೇ ಗಣರಾಜ್ಯೋತ್ಸವದ ಶುಭಸಂದರ್ಭದಲ್ಲಿ, ಸಾರ್ವಜನಿಕ ಸೇವೆಯನ್ನು ದೇಶದ ಸ್ವಾತಂತ್ರ್ಯ ಹೋರಾಟದೊಂದಿಗೆ ಮರುಸಂಪರ್ಕಗೊಳಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಖಾದಿ ಬಳಕೆಯನ್ನು ಉತ್ತೇಜಿಸಲು ಒಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಅದರಂತೆ, ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಸಂಸ್ಥೆಗಳು/ ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ ಅಧಿಕಾರಿ/ ನೌಕರರುಗಳು “ಸ್ವಯಂ ಪ್ರೇರಣೆಯಿಂದ” ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವುದು ಅಲ್ಲದೇ, ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವ ಸೇರಿದಂತೆ ಎಲ್ಲಾ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಖಾದಿ ಉಡುಪನ್ನು ಧರಿಸುವಂತೆ ತಮ್ಮ ಇಲಾಖೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ನಿರ್ದೇಶನ ನೀಡಲು ಕೋರಿದೆ.
ಈ ಕ್ರಮವು ಸರ್ಕಾರಿ ಅಧಿಕಾರಿ/ ನೌಕರರುಗಳಲ್ಲಿ ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ, ಐಕ್ಯತೆ, ರಾಷ್ಟ್ರೀಯ ಭಾವನೆ, ಭಾರತೀಯತೆ, ಸ್ವಾಭಿಮಾನ ಮತ್ತು ಸಾಮಾಜಿಕ ಜವಾಬ್ದಾರಿಯ ಭಾವನೆಯನ್ನು ಬೆಳೆಸುವಲ್ಲಿ ಸಹಾಯಕವಾಗಲಿದೆ ಎಂದು ಭಾವಿಸಿದೆ.
ಎಲ್ಲಾ ಜಿಲ್ಲೆಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 176 ಖಾದಿ ಸಂಘ-ಸಂಸ್ಥೆಗಳ ಹೆಸರು, ವಿಳಾಸ ಹಾಗೂ ಉತ್ಪನ್ನಗಳ ವಿವರಗಳನ್ನು https://khadi.karnataka.gov.in ದಲ್ಲಿ ಪಡೆಯಬಹುದಾಗಿದೆ.
key words: wearing “Khadi” clothes, mandatory, first Saturday, of the month, Government circular

SUMMARY:
From now on, wearing “Khadi” clothes will be mandatory on the first Saturday of the month: Government circular.

The state government has taken a significant decision to promote the use of Khadi. Accordingly, it has asked all the officers/employees of all government/aided institutions/corporations/board/autonomous institutions/universities in the state to wear Khadi on the first Saturday of every month “on their own initiative”.





