ದಶಕದ ವಿಸ್ಡನ್ ಐದು ಕ್ರಿಕೆಟಿಗರ ಪಟ್ಟಿಯಲ್ಲಿ ‘ಕಿಂಗ್’ ಕೊಹ್ಲಿ..

ಲಂಡನ್, ಡಿಸೆಂಬರ್ 26, 2019 (www.justkannada.in): ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ದಶಕದ ವಿಸ್ಡನ್ ಐದು ಕ್ರಿಕೆಟಿಗರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕ್ರಿಕೆಟ್ ಆಸ್ಟ್ರೇಲಿಯಾ ದಶಕದ ಟೆಸ್ಟ್ ತಂಡದ ನಾಯಕ ಗೌರವಕ್ಕೆ ಪಾತ್ರರಾಗಿದ್ದ ಕೊಹ್ಲಿಗೆ ಈಗ ಮತ್ತೊಂದು ಬಂದಿದೆ.  ಕೊಹ್ಲಿ ಜತೆ, ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್, ದಕ್ಷಿಣ ಆಫ್ರಿಕಾದ ಡೇಲ್ ಸ್ಟೇನ್, ಎ.ಬಿ ಡಿವಿಲಿಯರ್ಸ್ ಹಾಗೂ ಎಲಿಸ್ ಪೆರ್ರಿ ಅವರೂ ಈ ಗೌರವಕ್ಕೆ ಪಾತ್ರರಾಗಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ವಿಸ್ಡನ್, ‘2014 ರಲ್ಲಿ ಇಂಗ್ಲೆಂಡ್ ಪ್ರವಾಸದ ಅಂತ್ಯ ಮತ್ತು ನವೆಂಬರ್‌ನಲ್ಲಿ ಕೋಲ್ಕತ್ತಾದಲ್ಲಿ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ನಡುವೆ, ಕೊಹ್ಲಿ 63 ಸರಾಸರಿಯಲ್ಲಿ 21 ಶತಕ ಮತ್ತು 13 ಅರ್ಧಶತಕಗಳನ್ನು ಸಿಡಿಸಿದ್ದಾರೆ ಎಂದು ತಿಳಿಸಿದೆ.