ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜುಗೆ ಗೇಟ್ ಪಾಸ್.

ನವದೆಹಲಿ,ಮೇ,18,2023(www.justkannada.in): ಕೇಂದ್ರ ಸಚಿವ ಸಂಪುಟ ಪುನಾರಚನೆ ಮಾಡಲಾಗಿದ್ದು ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜು ಅವರಿಗೆ ಗೇಟ್ ಪಾಸ್  ನೀಡಲಾಗಿದೆ.

ಕೇಂದ್ರ ಕಾನೂನು ಸಚಿವರಾಗಿದ್ದ ಕಿರಣ್ ರಿಜಿಜು ಅವರಿಗೆ ಬೇರೆ ಖಾತೆ ನೀಡಲಾಗಿದೆ.  ಕೇಂದ್ರ ಕಾನೂನು ಸಚಿವರಾಗಿ ಅರ್ಜುನ್ ರಾಮ್ ಮೇಘವಾಲ್ ಅವರನ್ನ ನೇಮಿಸಲಾಗಿದೆ.  ಕಿರಣ್ ರಿಜಿಜುಗೆ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

2019ರಲ್ಲಿ ಕಿರಣ್ ರಿಜಿಜು ಅವರನ್ನ ಕ್ರೀಡಾ ಸಚಿವರನ್ನಾಗಿ ನೇಮಿಸಲಾಯಿತು. ಜುಲೈ 2021ರಲ್ಲಿ ಸಂಪುಟ ವಿಸ್ತರಣೆ ಸಮಯದಲ್ಲಿ ಅವರನ್ನು ಕಾನೂನು ಸಚಿವರನ್ನಾಗಿ ಮಾಡಲಾಗಿತ್ತು.ರವಿಶಂಕರ್ ಪ್ರಸಾದ್ ಬದಲಿಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿತ್ತು.

Key words: Kiran Rijiju – Union -Law Minister-change