ಅ.23ರಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ: ಈಗಾಗಲೇ 2 ಕೋಟಿ ರೂ. ಬಿಡುಗಡೆ- ಸಚಿವ ಗೋವಿಂದ ಕಾರಜೋಳ.

ಬೆಂಗಳೂರು,ಅಕ್ಟೋಬರ್,1,2022(www.justkannada.in): ಅಕ್ಟೋಬರ್ 23ರಿಂದ  ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಲಿದ್ದು,  ಕಿತ್ತೂರು ಉತ್ಸವಕ್ಕೆ ಈಗಾಗಲೇ 2 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಸಚಿವ ಗೋವಿಂದ ಕಾರಜೋಳ,  ನಾಳೆಯಿಂದ ಐತಿಹಾಸಿಕ ಕೇಂದ್ರಗಳಿಗೆ ವೀರಜ್ಯೋತಿ ಸಂಚಾರ ಮಾಡಲಿದೆ. ನಳೆ ಬೆಂಗಳೂರಿನ ಪುರಭವನದಲ್ಲಿ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಅಕ್ಟೋಬರ್ 23,24,25 ರಂದು ಕಿತ್ತೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಯಲಿದೆ ಎಂದರು.

ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಸಚಿವ ಗೋವಿಂದ ಕಾರಜೋಳ, ರಾಹುಲ್ ಗಾಂಧಿ ಅವರ ಯಾತ್ರೆ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ . ರಾಹುಲ್ ಗಾಂಧಿ ಏನೇನೋ ಯಾತ್ರೆ ಮಾಡುತ್ತಿದ್ದಾರೆ. ಅದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ಗೊತ್ತಿಲ್ಲ. ಕಾಂಗ್ರೆಸ್ ಅವಸಾನದ ಅಂಚಿನಲ್ಲಿದೆ ಎಂದರು.

Key words: Kittoor festival-three days – oct 23-Minister -Govinda Karajola.