ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ

ಬೆಂಗಳೂರು,ಆಗಸ್ಟ್,11,2025 (www.justkannada.in):  ಹೈಕಮಾಂಡ್ ಸೂಚನೆ ಮೇರೆಗೆ ಸಹಕಾರ ಸಚಿವ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಹುಲ್ ಗಾಂಧಿ ಅವರು  ಮತಗಳ್ಳತನ ಆರೋಪ ಮಾಡಿದ್ದರು. ಇದರ ವಿರುದ್ದ ಕೆ.ಎನ್ ರಾಜಣ್ಣ ಮಾತನಾಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜಣ್ಣ ಹೇಳಿಕೆಗೆ ಹೈಕಮಾಂಡ್  ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಅಲ್ಲದೆ ರಾಜೀನಾಮೆ ಪಡೆಯುವಂತೆ ಸಿಎಂ ಸಿದ್ದರಾಮಯ್ಯಗೆ ಸೂಚನೆ ನೀಡಿತ್ತು ಎನ್ನಲಾಗಿದೆ.

ಇದೀಗ ಹೈಕಮಾಂಡ್ ಸೂಚನೆ ಮೇರಗೆ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

Key words: KN Rajanna, resigns , minister post