ಕೊಚ್ಚಿ-ಮಂಗಳೂರು ನೈಸರ್ಗಿಕ ಗ್ಯಾಸ್ ಪೈಪ್ ಲೈನ್ ಲೋಕಾರ್ಪಣೆ….

ನವದೆಹಲಿ,ಜನವರಿ,5,2021(www.justkannada.in):  ಪ್ರಧಾನಿ ನರೇಂದ್ರ ಮೋದಿ  ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಚ್ಚಿ-ಮಂಗಳೂರು ನೈಸರ್ಗಿಕ ಅನಿಲ ಪೈಪ್ಲೈನ್ ಲೋಕಾರ್ಪಣೆಗೊಳಿಸಿದರು.jk-logo-justkannada-mysore

ಕೇರಳದ ಕೊಚ್ಚಿಯಿಂದ ಕರ್ನಾಟಕದ ಮಂಗಳೂರಿಗೆ ನೈಸರ್ಗಿಕ ಅನಿಲ ಪೂರೈಸುವ ಪೈಪ್ಲೈನ್ ಅನ್ನು ಗೈಲ್ ಇಂಡಿಯಾ ನಿರ್ಮಿಸಿದೆ. ಸುಮಾರು 3,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 450 ಕಿ.ಮೀ ಉದ್ದದ ಪೈಪ್ಲೈನ್ ಇದಾಗಿದ್ದು, 2009ರಲ್ಲೇ ಇದರ ನಿರ್ಮಾಣ ಕಾಮಗಾರಿ ಆರಂಭವಾಗಿತ್ತು.kochi-mangalore-natural-gas-pipeline-inauguration-pm-narendra-modi

ದಿನಕ್ಕೆ 12 ಮಿಲಿಯನ್ ಮೆಟ್ರಿಕ್ ಸ್ಟ್ಯಾಂಡರ್ಡ್ ಕ್ಯೂಬಿಕ್ ಮೀಟರ್ ಅನಿಲವನ್ನು ಸಾಗಿಸುವ ಸಾಮರ್ಥ್ಯ ಹೊಂದಿದೆ. ವಾಹನಗಳ ಪೂರೈಕೆ (ಸಿಎನ್‌ಜಿ), ಗೃಹ ಬಳಕೆ (ಪಿಎನ್‌ಜಿ) ವಾಣಿಜ್ಯ ಬಳಕೆ ಹಾಗೂ ಕೈಗಾರಿಕೆಗಳ
ಬಳಕೆ ಎಂಬುದಾಗಿ ಬೇರ್ಪಡಿಸಿ ಗೇಲ್‌ ಸಂಸ್ಥೆಯು ಅನಿಲ ಪೂರೈಕೆ ಮಾಡಲಿದೆ.

Key words:  Kochi-Mangalore- Natural Gas- Pipeline- inauguration- PM Narendra modi.