Sunday, October 25, 2026

Dasara Wishes

ಆಸ್ತಿ ವಿವಾದಕ್ಕೆ ಹರಿದ ನೆತ್ತರು: ಗುಂಡಿಕ್ಕಿ ಆರು ಮಂದಿಯ ಹತ್ಯೆ DasraWishes_JK DasraWishes JK
Happy Dasara
Home Front Page ಕೊಚ್ಚಿ ವಿವಿ ಫೆಸ್ಟ್ ವೇಳೆ ಕಾಲ್ತುಳಿತ: ನಾಲ್ವರು ವಿದ್ಯಾರ್ಥಿಗಳು ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ಕೊಚ್ಚಿ ವಿವಿ ಫೆಸ್ಟ್ ವೇಳೆ ಕಾಲ್ತುಳಿತ: ನಾಲ್ವರು ವಿದ್ಯಾರ್ಥಿಗಳು ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

ಬೆಂಗಳೂರು, ನವೆಂಬರ್ 26, 2023 (www.justkannada.in): ಕೊಚ್ಚಿ ವಿಶ್ವವಿದ್ಯಾನಿಲಯದ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ.

ಖ್ಯಾತ ಗಾಯಕಿ ನಿಕಿತಾ ಗಾಂಧಿ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ತೆರೆದ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ನೀಡುವ ಮೊದಲು ಕಾಲ್ತುಳಿತ ಸಂಭವಿಸಿದೆ.

ಈ ಬಗ್ಗೆ ತನಿಖೆಗೆ ಕೇರಳ ಸರ್ಕಾರ ಶನಿವಾರ ಆದೇಶಿಸಿದೆ. ಉನ್ನತ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಮತ್ತು ಕೊಚ್ಚಿನ್ ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅವರನ್ನು ಒಳಗೊಂಡ ಮೂವರು ಸದಸ್ಯರ ತಂಡ ಪ್ರಕರಣದ ಕುರಿತು ತನಿಖೆ ನಡೆಸಲಿದೆ.

ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವಿಗೀಡಾಗಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅಂದಹಾಗೆ ದುರಂತ ಸಂಭವಿಸಿದಾಗ ಗಾಯಕಿ ತನ್ನ ಪ್ರದರ್ಶನವನ್ನು ಪ್ರಾರಂಭಿಸಿರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.