ಕೊಡಗಿನಲ್ಲಿ ಸಿದ್ಧರಾಮಯ್ಯ ಕಾರಿಗೆ ಘೇರಾವ್, ಕಪ್ಪು ಬಾವುಟ ಪ್ರದರ್ಶನ.

ಕೊಡಗು,ಆಗಸ್ಟ್,18,2022(www.justkannada.in): ಕೊಡಗು ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಅವಲೋಕಿಸಲು ಪ್ರವಾಸ ಕೈಗೊಂಡಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಸಿದ್ಧರಾಮಯ್ಯ ಅವರ ಕೊಡಗು ಜಿಲ್ಲಾ ಭೇಟಿ ವಿರೋಧಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು  ಪ್ರತಿಭಟನೆ ನಡೆಸಿದ್ದು ವಿರಾಜಪೇಟೆ ತಾಲ್ಲೂಕಿನ ತಿತಿಮತಿಯಲ್ಲಿ ಸಿದ‍್ಧರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಸಿದ್ಧರಾಮಯ್ಯ ಟಿಪ್ಪು ಸುಲ್ತಾನ್ ಶಿಷ್ಯ, ಸಿದ್ಧರಾಮಯ್ಯ ಗೋಬ್ಯಾಕ್ ಎಂದು ಘೋಷಣೆ ಕೂಗಿ ಕಾರಿಗೆ ಬಿಜೆಪಿ ಕಾರ್ಯಕರ್ತರು ಪೋಸ್ಟರ್ ಎಸೆದು ಕಿಡಿಕಾರಿದ್ದುಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ  ನಡುವೆ ವಾಗ್ವಾದ ನಡೆದಿದೆ.

Key words:  kodagu-black flag –former CM- Siddaramaiah- car