ಕೊಡಗಿನ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅಧಿಕಾರ ಸ್ವೀಕಾರ.

 

ಕೊಡಗು, ಜ.23, 2021 : (www.justkannada.in news ) ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಶನಿವಾರ ಅಧಿಕಾರ ಸ್ವೀಕರಿಸಿದರು.

ಈ ಮೊದಲು ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಅನೀಸ್‌ ಕಣ್ಮಣಿ ಅವರು ಸುದೀರ್ಘ ರಜೆ ಮೇಲೆ ತೆರಳಿರುವ ಕಾರಣ ಹುದ್ದೆ ಖಾಲಿಯಾಗಿತ್ತು. ಬಳಿಕ ಆ ಜಾಗದಲ್ಲಿ ಪ್ರಭಾರ ಜಿಲ್ಲಾಧಿಕಾರಿಯಾಗಿ‌ ಭನ್ವರ್ ಸಿಂಗ್ ಮೀನಾ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು.

kodagu-charulatha-somal-new-DC-IAS
ಚಾರುಲತ ಸೋಮಲ್ , ಈ ಹಿಂದೆ ಕೊಡಗು ಜಿಪಂ‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಯಾಗಿ ಕಾರ್ಯ ನಿರ್ವಹಿಸಿದ್ದರು.

——-

key words : kodagu-charulatha-somal-new-DC-IAS