ಕೊಡಗು ಜಿಲ್ಲೆಯಲ್ಲಿ ಮತ್ತೆ ಜಲಭೀತಿ: ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ…

ಕೊಡಗು,ಆ,21,2019(www.justkannada.in):  ಕೊಡಗು ಜಿಲ್ಲೆಯಲ್ಲಿ ಮತ್ತೆ ಜಲಭೀತಿ ಎದುರಾಗಲಿದ್ದು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

 ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ವರದಿ ಆಧರಿಸಿ  ಕೊಡಗು ಜಿಲ್ಲಾಧಿಕಾರಿ ಕಣ್ಮಣಿ ಜಾಯ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು ಜನರು ಎಚ್ಚರಿಕೆಯಿಂದಿರಲು ಸೂಚನೆ ನೀಡಿದ್ದಾರೆ.

ಹಾಗೆಯೇ ಭಾರಿ ಮಳೆಯಿಂದ ರಸ್ತೆ ಸಂಪರ್ಕ ಕಡಿತವಾಗಿರುವ ಕಡೆ ಹೋಗದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ. ಗುಡ್ಡ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದಿಂದ ಪ್ರವಾಸಿಗರಿಗೆ ಎಚ್ಚರಿಕೆ ನೀಡಲಾಗಿದೆ.

Key words: Kodagu district-Heavy rains -today – tomorrow.