ಕಾರ್ಯಾಚರಣೆಗೆ ನಡೆಸಲು ಬಂದ ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಕಾಡಾನೆಗಳು: ಮರವೇರಿ ಕುಳಿತ ಸಿಬ್ಬಂದಿ..!

ಕೊಡಗು,ಜ,6,2020(www.justkannada.in): ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟಲು ಕಾರ್ಯಾಚರಣೆ ನಡೆಸಲು ಬಂದಿದ್ದ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕಾಡಾನೆಗಳು ಬೆನ್ನಟ್ಟಿದ್ದು ಈ ವೇಳೆ ಅರಣ್ಯ ಸಿಬ್ಬಂದಿಗಳು ಮರವೇರಿ ಕುಳಿತ ಘಟನೆ  ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಕಳೆದ ಮೂರು ದಿನಗಳ ಹಿಂದೆ ಪುಲಿಯೇರಿ, ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಾಡಾನೆಗಳು ಬೀಡು ಬಿಟ್ಟು ಪುಟ್ಟ ಬಾಲಕಿಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ  ಓಡಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕರಡಿಗೋಡು ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಇಂಜಿಲಗೆರೆ ಭಾಗಕ್ಕೆ ಸಿದ್ದಾಪುರ, ಕಾಫಿ ತೋಟಗಳಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಕಾಡಿಗಟ್ಟಲು ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕರಡಿಗೋಡು ಗ್ರಾಮದಲ್ಲಿ ನಡೆದಿದೆ.

ಕಳೆದೆರಡು ದಿನಗಳ ಹಿಂದೆ ಪುಲಿಯೇರಿ, ಇಂಜಿಲಗೆರೆ ವ್ಯಾಪ್ತಿಯಲ್ಲಿ ಕಾಡಾನೆಗಳು ಬೀಡು ಬಿಟ್ಟು ಪುಟ್ಟ ಬಾಲಕಿಯ ಮೇಲೆ ಒಂಟಿ ಸಲಗ ದಾಳಿ ನಡೆಸಿದ್ದು ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಅರಣ್ಯಕ್ಕೆ  ಓಡಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಕರಡಿಗೋಡು ಗ್ರಾಮದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳು ಇಂಜಿಲಗೆರೆ ಭಾಗಕ್ಕೆ ಕಾಡಾನೆಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಿಗೆ ಓಡಿಸಲು ಯತ್ನಿಸಿದರು. ಆದರೆ ಎರಡು ಕಾಡಾನೆಗಳು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಕಂಡಕೂಡಲೆ ಅಟ್ಟಿಸಿಕೊಂಡು  ಬರುತಿದ್ದವು ಎನ್ನಲಾಗಿದೆ. ಇದರಿಂದ ತಪ್ಪಿಸಿಕೊಳ್ಳಲು ಸಿಬ್ಬಂದಿ ಮರಗಳನ್ನು ಏರಿದ್ದಾರೆ. ಕಾಡಾನೆಗಳು ಪಟಾಕಿ ಸಿಡಿಸಿದರೂ ತೋಟದಿಂದ ಹೊರ ಹೋಗಲು ಹಿಂದೇಟು ಹಾಕುತ್ತಿದ್ದು, ಆಹಾರವನ್ನು ಅರಸಿಕೊಂಡು ಕಾಡಿನಿಂದ ನಾಡಿಗೆ ಬರುತ್ತಿವೆ. ಕಾಡಿನಲ್ಲಿ ಆಹಾರ ಮತ್ತು ನೀರಿನ ಕೊರತೆ ಇರುವ ಕಾರಣ ಕಾಡಾನೆಗಳು ಕಾಫಿ ತೋಟಗಳಿಗೆ ಲಗ್ಗೆ ಇಡುತ್ತಿವೆ. ಅಲ್ಲದೆ ಮಾನವನ ಮೇಲೆ ದಾಳಿ ನಡೆಸುತ್ತಿವೆ. ಕೂಡಲೇ ಸರಕಾರ ಕಾಡಾನೆಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಶಾಶ್ವತ ಯೋಜನೆಯನ್ನು ರೂಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Key words: kodagu- elephant- chased- forest staff -operation