ದೇವಸ್ಥಾನದ ಬೀಗ ಮುರಿದು ಹುಂಡಿ ದೋಚಿ ಪರಾರಿಯಾದ ಖದೀಮರು…

ಕೊಡಗು,ಡಿ,22,2019(www.justkannada.in): ದೇವಸ್ಥಾನದ ಬೀಗ ಮುರಿದು ಹುಂಡಿ ದೋಚಿ ಖದೀಮರು ಪರಾರಿಯಾಗಿರುವ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನಲ್ಲಿ ನಡೆದಿದೆ.

ಮಡಿಕೇರಿ ತಾಲ್ಲೂಕು ನಾಪೋಕ್ಲು  ಸಮೀಪದ ಕೊಳಕೇರಿ ಭಗವತಿ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ಕಳ್ಳರು ದೇವಸ್ಥಾನದ ಬೀಗ ಮುರಿದು  ಹುಂಡಿಯಲ್ಲಿದ್ದ 40 ಸಾವಿರ ನಗದು, ಒಂದು ಬೆಳ್ಳಿ ಚೆಂಬು,3 ಬೆಳ್ಳಿ ಗಣಪತಿ ವಿಗ್ರಹ ಸೇರಿ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಹಣ, ವಸ್ತುಗಳನ್ನ ದೋಚಿ ಪರಾರಿಯಾಗಿದ್ದಾರೆ.

ತಡರಾತ್ರಿ ನಡೆದಿರುವ ಘಟನೆ, ತಡವಾಗಿ ಬೆಳಕಿಗೆ ಬಂದಿದೆ. ಸ್ಥಳಕ್ಕೆ ನಾಪೋಕ್ಲು ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Key words: kodagu-temple-thief-money-robbery