ಕೋಲಾರ ಟಿಕೆಟ್ ಕಗ್ಗಂಟು: ಸಿಎಂ ನೇತೃತ್ವದ ಸಂಧಾನ ಸಭೆ ಯಶಸ್ವಿ.

ಬೆಂಗಳೂರು,ಮಾರ್ಚ್,28,2024 (www.justkannada.in): ಕೋಲಾರ ಕ್ಷೇತ್ರದಿಂದ ಸಚಿವ ಕೆ.ಎಚ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣಗೆ ಟಿಕೆಟ್ ನೀಡದಂತೆ ಆಗ್ರಹಿಸಿ ಬಂಡಾಯವೆದ್ದಿದ್ದ ಐವರು ಶಾಸಕರ ಜೊತೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ.

ಸಚಿವ ಎಂ.ಸಿ ಸುಧಾಕರ್, ಶಾಸಕರಾದ ಕೊತ್ತೂರು ಮಂಜುನಾಥ್, ನಂಜೇಗೌಡ  ಎಂಎಲ್ ಸಿಗಳಾದ ನಜೀರ್ ಅಹ್ಮದ್ ಮತ್ತು ಅನಿಲ್ ಕುಮಾರ್ ನಿನ್ನೆ ರಾಜೀನಾಮೆಗೆ ಮುಂದಾಗಿದ್ದರು. ಈ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಂಧಾನ ಸಭೆ ನಡೆದಿದ್ದು ಸಭೆ ಯಶಸ್ವಿಯಾಗಿದೆ ಎಂದು ಸಚಿವ ಬೈರತಿ ಸುರೇಶ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಸಚಿವ ಭೈರತಿ ಸುರೇಶ್,  ಸಿಎಂ ಡಿಸಿಎಂ ನೇತೃತ್ವದ ಸಂಧಾನ ಸಭೆ ಯಶಸ್ವಿಯಾಗಿದೆ.  ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದಿದ್ದಾರೆ.  ಯಾರ ಹೆಸರಿಗೂ ಶಾಸಕರು ವಿರೋಧ ವ್ಯಕ್ತಪಡಿಸಲ್ಲ ಎಂದಿದ್ದಾರೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ ಎಂದಿದ್ದಾರೆ ಸಭೆಯಲ್ಲಿ ಕೋಲಾರ ಶಾಸಕರು ಹೇಳಿದ್ದಾರೆ ಎಂದು ತಿಳಿಸಿದರು.

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ- ಸಚಿವ ಎಂಸಿ ಸುಧಾಕರ್.

ಈ ಕುರಿತು ಮಾತನಾಡಿದ ಸಚಿವ ಎಂಸಿ ಸುಧಾಕರ್,  ನಿನ್ನೆ ಆದಂತ ಸಮಸ್ಯೆ ಬಗ್ಗೆ ಸಿಎಂ ಡಿಸಿಎಂ ಬಳಿ ಹೇಳಿಕೊಂಡಿದ್ದೇವೆ.  ರಾಜೀನಾಮೆ ನೀಡಲು ಮುಂದಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸುತ್ತೇವೆ. ಏನೇ ಭಿನ್ನಾಭಿಪ್ರಾಯಗಳಿದ್ದರೂ ಸರಿಪಡಿಸುವುದಾಗಿ ಹೇಳಿದ್ದಾರೆ . ಸಿಎಂ ಡಿಸಿಎಂ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ದ.  ನಮ್ಮಿಂದ ಪಕ್ಷಕ್ಕೆ ಹಾನಿಯಾಗಲು ಬಿಡಲ್ಲ ಪಕ್ಷದ ಆದೇಶಕ್ಕೆ ಗೌರವ ಕೊಟ್ಟು ಸಿಎಂ ಹೇಳಿದಂತೆ ನಡೆಯುತ್ತೇವೆ ಎಂದರು.

Key words: Kolar, meeting, CM, success