Wednesday, August 26, 2026

BDA Apartments

Home Front Page ಕೋಲಾರ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ….

ಕೋಲಾರ ಜಿಲ್ಲಾ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ: ಅಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ….

ಕೋಲಾರ,ನ,28,2019(www.justkannada.in): ಕೋಲಾರ ಜಿಲ್ಲಾ ಪಂಚಾಯತ್ ನಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಗೇರಿದ್ದು, ಕೋಲಾರ ಜಿಲ್ಲಾ ಪಂಚಾಯತ್ ನ  ನೂತನ ಅಧ್ಯಕ್ಷರಾಗಿ ಸಿ.ಎಸ್.ವೆಂಕಟೇಶ್ ಆಯ್ಕೆಯಾಗಿದ್ದಾರೆ.

ಕೋಲಾರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಕಾಂಗ್ರೆಸ್ ನಾಯಕ ಕೆ.ಎಸ್ ಮುನಿಯಪ್ಪ ಬಣಕ್ಕೆ ಅಧ್ಯಕ್ಷಗಾದೆ ಒಲಿದಿದೆ.  ಕೋಲಾರ ತಾಲ್ಲೂಕಿನ ವೇಮಗಲ್ ಜಿಲ್ಲಾ ಪಂಚಾಯತ್ ಸದಸ್ಯ ಸಿ.ಎಸ್ ವೆಂಕಟೇಶ್ ಕೋಲಾರ ಜಿ.ಪಂನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಚುನಾವಣೆಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಣಕ್ಕೆ ಹಿನ್ನಡೆಯಾಗಿದೆ. ನೂತನ ಅಧ್ಯಕ್ಷರಿಗೆ ಜೆಡಿಎಸ್, ಬಿಜೆಪಿ ಕಾಂಗ್ರೆಸ್ 23 ಸದಸ್ಯರಿದ ಬೆಂಬಲದ ಸೂಚನೆ ಸಿಕ್ಕಿದೆ.

Key words: kolar-zilla panchayath-congress-member-CS Venkjatesh-president