ಹಳ್ಳದಲ್ಲಿ ಕೊಚ್ಚಿ ಹೋಗಿದ್ಧ ಓರ್ವ ಪೊಲೀಸ್ ಸಿಬ್ಬಂದಿ ಮೃತದೇಹ ಪತ್ತೆ: ಮತ್ತೊಬ್ಬ ಸಿಬ್ಬಂದಿಗಾಗಿ ಶೋಧ ಕಾರ್ಯ.

ಕೊಪ್ಪಳ, ಸೆಪ್ಟಂಬರ್,9,2022(www.justkannada.in): ಹಳ್ಳದಲ್ಲಿ ಕೊಚ್ಚಿ ಹೋಗಿದ್ಧ  ಇಬ್ಬರು ಪೊಲೀಸ್ ಸಿಬ್ಬಂದಿಯ ಪೈಕಿ ಓರ್ವ ಸಿಬ್ಬಂದಿಯ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗದಗ ಜಿಲ್ಲೆ ಗಜೇಂದ್ರಗಡಕ್ಕೆ ಬಂದೋಬಸ್ತ್​​ ಗೆ ತೆರಳಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್​ಗಳು ಹಳ್ಳದಲ್ಲಿ ಕೊಚ್ಚಿಹೋದ ಘಟನೆ ಯಲಬುರ್ಗಾ ತಾಲೂಕಿನ ಬಂಡಿಹಾಳ ಗ್ರಾಮದ ಬಳಿ ನಡೆದಿದೆ. ರೈತರ ಪ್ರತಿಭಟನೆ ಹಿನ್ನೆಲೆ ಪೊಲೀಸ್ ಸಿಬ್ಬಂದಿಗಳಾದ ಮಹೇಶ್ ಮತ್ತು ನಿಂಗಪ್ಪ ಅವರು ಭದ್ರತೆಗೆ ತೆರಳಿದ್ದರು. ಈ ನಡುವೆ ನಿನ್ನೆ ರಾತ್ರಿ ಹಿಂದಿರುಗುವಾಗ ಹಳ್ಳದಲ್ಲಿ ಕೊಚ್ಚಿಹೋಗಿದ್ದರು.

ಇದೀಗ ನಿಂಗಪ್ಪ ಅವರ ಮೃತದೇಹ ಪತ್ತೆಯಾಗಿದ್ದು ಮಹೇಶ್ ಗಾಗಿ ಶೋಧ ಕಾರ್ಯವನ್ನ ಅಗ್ನಿಶಾಮಕ ದಳದ ಸಿಬ್ಬಂದಿ ಮುಂದುವರೆಸಿದ್ದಾರೆ.

Key words: koppal- Dead body – police- found