ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ನೇಮಕ.

ಬೆಂಗಳೂರು,ಡಿಸೆಂಬರ್ 25,2023(www.justkannada.in): ಕರ್ನಾಟಕ ವಿಧಾನಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು  ನೇಮಕ ಮಾಡಲಾಗಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಸೂಚನೆ ಮೇರೆಗೆ   ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ ವಿಜಯೇಂದ್ರ ಅವರು ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್ ವಿಪಕ್ಷನಾಯಕರಾಗಿ ನೇಮಕ ಮಾಡಿದ್ದಾರೆ.

ಇನ್ನು ವಿಧಾನ ಪರಿಷತ್ ವಿಪಕ್ಷ ಉಪ ನಾಯಕನಾಗಿ ಸುನೀಲ್ ವಲ್ಯಾಪುರೆ ಅವರು ಮತ್ತು ವಿಧಾನಸಭೆಯ ವಿಪಕ್ಷ ಉಪ ನಾಯಕನಾಗಿ ಅರವಿಂದ ಬೆಲ್ಲದ್ ಅವರು ನೇಮಕವಾಗಿದ್ದಾರೆ. ಇನ್ನು ವಿಧಾನಸಭೆಯ ಮುಖ್ಯ ಸಚೇತಕರಾಗಿ ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್ ನೇಮಕವಾದರೆ, ವಿಧಾನ ಪರಿಷತ್​ ನ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ಅವರನ್ನು ನೇಮಿಸಲಾಗಿದೆ.

Key words: Kota Srinivasa Pujari -appointed – legislative council- Opposition Leader