ಬೆಂಗಳೂರು,ಸೆಪ್ಟಂಬರ್,5,2025 (www.justkannada.in): ಖ್ಯಾತ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪ ಅರುಣ್ ಕುಮಾರ್ ಅವರು ತಮ್ಮ PA ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿದ್ದ ಮೊದಲ ಚಿತ್ರ “ಕೊತ್ತಲವಾಡಿ” ಇಂದಿನಿಂದ ಅಮೇಜಾನ್ ಪ್ರೈಮ್ ನಲ್ಲಿ ವೀಕ್ಷಿಸಬಹುದಾಗಿದೆ.
ಈ ಚಿತ್ರವನ್ನು ಶ್ರೀರಾಜ್ ನಿರ್ದೇಶಿಸಿ, ಪೃಥ್ವಿ ಅಂಬರ್ ಹಾಗೂ ಕಾವ್ಯ ಶೈವ ನಾಯಕ – ನಾಯಕಿಯಾಗಿ ನಟಿಸಿದ್ದು, ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾಗಿತ್ತು. ಸೆಪ್ಟೆಂಬರ್ 5(ಇಂದಿನಿಂದ) ರಿಂದ ಈ ಚಿತ್ರವನ್ನು ಅಮೇಜಾನ್ ಪ್ರೈಮ್ ನಲ್ಲೂ ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ವೀಕ್ಷಿಸಬಹುದಾಗಿದೆ. ಮೊದಲು ಸೆಪ್ಟೆಂಬರ್ 5 ರಂದು ಕನ್ನಡದಲ್ಲಿ ಮಾತ್ರ ಪ್ರದರ್ಶನವಾಗಲಿದ್ದು, ನಂತರದ ದಿನಗಳಲ್ಲಿ ಮಿಕ್ಕ ಭಾಷೆಗಳಲ್ಲಿ ವೀಕ್ಷಿಸಬಹುದು.
ಕಾರ್ತಿಕ್ ಎಸ್ ಛಾಯಾಗ್ರಹಣ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ಹಾಗೂ ಅಭಿನಂದನ್ ಕಶ್ಯಪ್ ಹಿನ್ನೆಲೆ ಸಂಗೀತ ನೀಡಿರುವ ಈ ಚಿತ್ರದ ತಾರಾಬಳಗದಲ್ಲಿ ಪೃಥ್ವಿ ಅಂಬರ್, ಕಾವ್ಯ ಶೈವ, ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಮಾನಸಿ ಸುಧೀರ್ ಮುಂತಾದವರಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ.
Key words: Kothalavadi, Movie, Amazon Prime, today