ಶಾಸಕ ರಘುಪತಿ ಭಟ್ ಗೆ ಕೋವಿಡ್ ದೃಢ

ಉಡುಪಿ,ಅಕ್ಟೋಬರ್,11,2020(www.justkannada.in) :  ಶಾಸಕ ರಘುಪತಿ ಭಟ್ ಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಸೋಂಕು ದೃಢಪಟ್ಟ ಬಗ್ಗೆ ತಿಳಿಸಿದ್ದಾರೆ.jk-logo-justkannada-logo

ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವ್ಯದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆಗಾಗಿ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆಯಿರಲಿ ಎಂದು ಹೇಳಿದ್ದಾರೆ.

Kovid-MLA-Raghupati Bhatt

ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆವಹಿಸಿ. ಜಿಲ್ಲೆಯಲ್ಲಿ ಸದಸ್ಯ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ  ಇರುವುದು ಅವಶ್ಯಕ ಎಂದು ತಿಳಿಸಿದ್ದಾರೆ.

key words : Kovid-MLA-Raghupati Bhatt