ಅನರ್ಹಗೊಂಡ 17 ಶಾಸಕರ ಕ್ಷೇತ್ರದಲ್ಲಿ ಗೆಲ್ಲಲು ‘ಕೈ’ ಪ್ಲಾನ್: ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಭೆ…

ಬೆಂಗಳೂರು,ಆ,1,2019(www.justkannada.in): ಅನರ್ಹಗೊಂಡಿರುವ 17 ಶಾಸಕರ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಈವಾಗಿನಿಂದಲೇ ತಯಾರಿ ನಡೆಸುತ್ತಿದ್ದು ಈ ಸಂಬಂಧ ಇಂದು ಸಭೆ ನಡೆಸಿ ಕಾಂಗ್ರೆಸ್ ನಾಯಕರು ಚರ್ಚೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ಸಭೆ ನಡೆಯಲಿದೆ. ಅನರ್ಹಗೊಂಡ ಶಾಸಕ ಕ್ಷೇತ್ರದಲ್ಲಿ ಶತಾಯಗತಾಯ ಗೆಲ್ಲಲು ಕಾಂಗ್ರೆಸ್ ನಾಯಕರು ಸಿದ್ಧತೆ ಆರಂಭಿಸಿದ್ದು,  ಸಭೆಯಲ್ಲಿ ಸಭೆಯಲ್ಲಿ ವೀಕ್ಷಕರ ನೇಮಕ , ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಅತೃಪ್ತಿ ಕಾರಣ ನೀಡಿದ 14 ಮಂದಿ  ಕಾಂಗ್ರೆಸ್ ಶಾಸಕರು ತಮ್ಮ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 14 ಕಾಂಗ್ರೆಸ್ ಶಾಸಕರು ಮತ್ತು ಮೂವರು ಜೆಡಿಎಸ್ ಅತೃಪ್ತ ಶಾಸಕರು ಸೇರಿದಂತೆ 17 ಮಂದಿ ಶಾಸಕರನ್ನ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದರು.

Key words: kpcc- Dinesh Gundurao-discussion- meeting-win -17 disqualified MLAs- Assembly constituency