ನಾಲ್ವರು ಕಾರ್ಯಾಧ್ಯಕ್ಷರ ನೇಮಕ ವಿಚಾರ: ನಾನು ಒತ್ತಡ ಹಾಕಿಲ್ಲ – ಮಾಜಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ….

ಮಂಡ್ಯ,ಜ,21,2020(www.justkannada.in):  ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರ ನೇಮಕಕ್ಕೆ ನಾನು ಒತ್ತಡ ಹಾಕಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಕೆಪಿಸಿಸಿಗೆ ನಾಲ್ಕು ಕಾರ್ಯಾಧ್ಯಕ್ಷರ ಹುದ್ದೆ ಸೃಷ್ಠಿಸಿಬೇಕು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬೇಡಿಕೆ ಇಟ್ಟಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಕುರಿತು  ಮಂಡ್ಯದಲ್ಲಿ ಇಂದು ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾಲ್ವರು ಕಾರ್ಯಾಧ್ಯಕ್ಷರ ನೇಮಕಕ್ಕೆ ನಾನು ಒತ್ತಡ ಹಾಕಿಲ್ಲ.  ಆರ್ ವಿ ದೇಶಪಾಂಡೆ ಕಾಲದಲ್ಲಿ ಕಾರ್ಯಾಧ್ಯಕ್ಷರು ಇರಲಿಲ್ವಾ  ಡಿಕೆಶಿವಕುಮಾರ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರಲಿಲ್ವಾ…? ಎಂದು ಪ್ರಶ್ನಿಸಿದರು.

ಹಾಗೆಯೇ ನಾಲ್ಕು ಕೆಪಿಸಿಸಿ ಕಾರ್ಯಾಧ್ಯಕ್ಷರ ಹುದ್ದೆ ಅವಶ್ಯಕತೆ ಇಲ್ಲ ಎಂದು ಪರಮೇಶ್ವರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಪರಮೇಶ್ವರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಂತರಿಕ ಪ್ರಜಾಪ್ರಭುತ್ವವಿರುವ ಕಾಂಗ್ರೆಸ್ ನಲ್ಲಿ ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಳ್ಳಬಹುದು. ಆದರೆ ಅಂತಿಮವಾಗಿ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು.

ಮಂಗಳೂರು ಏರ್ ಪೋರ್ಟ್ ನಲ್ಲಿ ಬಾಂಬ್ ಪತ್ತೆ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ,  ಇದು  ಜನರಲ್ಲಿ ಗಾಬರಿ ಉಂಟು ಮಾಡುವ ಘಟನೆಯಾಗಿದೆ.   ಮಂಗಳೂರಿನಲ್ಲಿ ಇಂತಹ ಅವಘಡ ನಡೆಯುತ್ತಲೇ ಇದೆ. ಇದನ್ನ ನಿಯಂತ್ರಿಸುವಲ್ಲಿ  ಸರ್ಕಾರದ ಗುಪ್ತದಳ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.

Key words: kpcc – four- presidents-Former CM- Siddaramaiah- clarified.