Sunday, August 2, 2026

BDA Apartments

Home Front Page ಮಾಜಿ ಸಿಎಂ ಸಿದ್ಧರಾಮಯ್ಯರಿಂದ ರಾಜ್ಯಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಭೇಟಿ, ಮಾತುಕತೆ…

ಮಾಜಿ ಸಿಎಂ ಸಿದ್ಧರಾಮಯ್ಯರಿಂದ ರಾಜ್ಯಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಭೇಟಿ, ಮಾತುಕತೆ…

ನವದೆಹಲಿ,ಜ,14,2020(www.justkannada.in):  ಕೆಪಿಸಿಸಿ ಅಧ್ಯಕ್ಷರ ನೇಮಕಕ್ಕಾಗಿ ಕಾಂಗ್ರೆಸ್ ತೀವ್ರ ಕಸರತ್ತು ನಡೆಸುತ್ತಿದ್ದು ಈ ನಡುವೆ ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇಂದು ರಾಜ್ಯಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನ ಭೇಟಿಯಾಗಿದ್ದಾರೆ.

ಮಾಜಿ ಸಿಎಂ ಸಿದ್ಧರಾಮಯ್ಯ ಜತೆ ಮಾಜಿ ಸಚಿವ ಎಂ.ಬಿ ಪಾಟೀಲ್ ಸಹ ತೆರಳಿದ್ದಾರೆ. ಕೆಸಿ ವೇಣುಗೋಪಾಲ್ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷರ ನೇಮಕ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಇಂದು ಮಧ್ಯಾಹ್ನ  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ. ಇದಕ್ಕೂ ಮುನ್ನ ಕೆ.ಸಿ ವೇಣುಗೋಪಾಲ್ ಅವರನ್ನ ಭೇಟಿಯಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಎಂಬಿ ಪಾಟೀಲ್ ಸೇರಿದಂತೆ ಹಲವು ಆಕಾಂಕ್ಷಿಗಳು ಲಾಬಿ ನಡೆಸುತ್ತಿದ್ದಾರೆ. ಹೀಗಾಗಿ ಯಾರಿಗೆ ಕೆಪಿಸಿಸಿ ಸಾರಥಿಯಾಗಲಿದ್ದಾರೆಂಬುದು ಕುತೂಹಲ ಕೆರಳಿಸಿದೆ.

Key words: kpcc  president- Appoint- former cm-siddaramaiah-meet- kc venugoapal