Tuesday, September 22, 2026

BDA Apartments

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ: ಪಕ್ಷದ ನಿರ್ಧಾರಕ್ಕೆ ಬದ್ಧ ಎಂದ ಕೆಪಿಸಿಸಿ...
Home Front Page ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ: ಪಕ್ಷದ ನಿರ್ಧಾರಕ್ಕೆ ಬದ್ಧ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ…..

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ: ಪಕ್ಷದ ನಿರ್ಧಾರಕ್ಕೆ ಬದ್ಧ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ…..

ತುಮಕೂರು ,ಜ,15,2020(www.justkannada.in): ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ ಸಂಬಂಧ ಪಕ್ಷದ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಈಶ್ವರ್ ಖಂಡ್ರೆ, ಕೆಪಿಸಿಸಿ ಅಧ್ಯಕ್ಷರ ನೇಮಕ  ವಿಚಾರದ ಬಗ್ಗೆ ಪಕ್ಷದ ವರಿಷ್ಟರಲ್ಲಿ  ಪ್ರತಿಯೊಂದು ಸಂಪೂರ್ಣ ಮಾಹಿತಿ ಇದೆ. ಪಕ್ಷದ ವರಿಷ್ಠರು ಸಂಕ್ರಾಂತಿ ಬಳಿಕ ಉತ್ತಮ ತೀರ್ಮಾನ ಕೈಗೊಳ್ಳುತ್ತಾರೆ. ಪಕ್ಷದ ತೀರ್ಮಾನಕ್ಕೆ ನಾವು ಬದ್ಧ ಎಂದರು.

ಯಾರಿಗೆ ಅವಕಾಶ ನೀಡಿದರೂ ಬೆಂಬಲ ನೀಡುತ್ತೇನೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಸಿದ್ಧರಾಮಯ್ಯ  ಪಕ್ಷದ ಪ್ರಬಲ ನಾಯಕರಾಗಿದ್ದಾರೆ.  ನಾನು ಯಾವುದೇ ಸ್ಥಾನದಲ್ಲಿದ್ದರೂ  ಅದನ್ನ ನಿಭಾಯಿಸುತ್ತೇನೆ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

Key words: KPCC President -appoints -Ishwar Khandre – decision- High Command