ಇಂದಿನಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಲ್ಯಾಣ ಕರ್ನಾಟಕ ಪ್ರವಾಸ

ಬೆಂಗಳೂರು, ನವೆಂಬರ್ 22, 2020 (www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದಿನಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಉದ್ದೇಶದಿಂದ ನಾಲ್ಕು ದಿನಗಳ ಕಾಲ ಪ್ರವಾಸವನ್ನು ಡಿಕೆಶಿ ನಡೆಸಲಿದ್ದಾರೆ. ಬಳ್ಳಾರಿ, ರಾಯಚೂರು, ಕಲಬುರಗಿ ಹಾಗೂ ಬೀದರ್ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಕಾಂಗ್ರೆಸ್ ಪಕ್ಷದ ಸಂಘಟನೆ ಉದ್ದೇಶದಿಂದ ಈ ಪ್ರವಾಸ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರಸ್ ನಾಯಕರು, ಸ್ಥಳೀಯ ಶಾಸಕರು, ಮಾಜಿ ಶಾಸಕರು, ಮಾಜಿ ಸಚಿವರು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನಾ ಸಭೆ ನಡೆಸಲಿದ್ದಾರೆ.