ವಿಶೇಷ ಅಧಿವೇಶನ, ಬಜೆಟ್ ಮರುಪರಿಶೀಲನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯ

ಬೆಂಗಳೂರು, ಮೇ 06, 2020 (www.justkannada.in): ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ.

ಸದ್ಯದ ಕಠಿಣ ಪರಿಸ್ಥಿತಿಯಲ್ಲಿ ಸಾಂಪ್ರದಾಯಿಕ ವೃತ್ತಿಪರರು, ರೈತರು, ದಿನಗೂಲಿ ಕಾರ್ಮಿಕರು, ಅಂಘಟಿತ ಕಾರ್ಮಿಕರು, ಸಂಕಷ್ಟದಲ್ಲಿದ್ದು, ಅವರಿಗೆ ತಕ್ಷಣ ಆರ್ಥಿಕ ನೆರವಿನ ಅಗತ್ಯವಿದೆ.

ಅಧಿವೇಶನ ಹೆಚ್ಚು ಪರಿಣಾಮಕಾರಿ ಹಾಗೂ ಅರ್ಥಪೂರ್ಣವಾಗಲಿದೆ. ದೇಶ ಕಟ್ಟುತ್ತಿರುವ ನಮ್ಮ ಸೋದರ, ಸೋದರಿಯರ ಹಿತ ಕಾಪಾಡುವ ಹೊಣೆ ನಮ್ಮೆಲ್ಲರದಾಗಿದೆ ಎಂದು ಹೇಳಿದ್ದಾರೆ.

ಈಗಿನ ಆರ್ಥಿಕ ಸಂಕಷ್ಟ ಪರಿಸ್ಥಿತಿ ಬಗ್ಗೆ ಸಮಾಲೋಚನೆ ನಡೆಸಲು ವಿಧಾನ ಮಂಡಲದ ವಿಶೇಷ ಅಧಿವೇಶನ ಕರೆಯಬೇಕು ಹಾಗೂ ಬಜೆಟ್ ಮರುಪರಿಶೀಲನೆ ಮಾಡಬೇಕು ಎಂದು ಟ್ವಿಟ್ಟರ್ ನಲ್ಲಿ ಒತ್ತಾಯಿಸಿದ್ದಾರೆ.